Select Your Language

Notifications

webdunia
webdunia
webdunia
webdunia

ಏಕದಿನ ಶ್ರೇಯಾಂಕ: ವಿರಾಟ್ ಕೊಹ್ಲಿ ನಂ.1, ರೋಹಿತ್ ಶರ್ಮಾ ನಂ.2

ಏಕದಿನ ಶ್ರೇಯಾಂಕ: ವಿರಾಟ್ ಕೊಹ್ಲಿ ನಂ.1, ರೋಹಿತ್ ಶರ್ಮಾ ನಂ.2
ದುಬೈ , ಬುಧವಾರ, 13 ನವೆಂಬರ್ 2019 (09:38 IST)
ದುಬೈ: ಐಸಿಸಿ ಬಿಡುಗಡೆಗೊಳಿಸಿರುವ ಲೇಟೆಸ್ಟ್ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಂ.1 ಮತ್ತು ಉಪನಾಯಕ ರೋಹಿತ್ ಶರ್ಮಾ ದ್ವಿತೀಯ ಸ್ಥಾನದಲ್ಲಿದ್ದಾರೆ.


895 ಅಂಕಗಳೊಂದಿಗೆ ಕೊಹ್ಲಿ ಅಗ್ರಸ್ಥಾನದಲ್ಲಿದ್ದರೆ, ರೋಹಿತ್ 863 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಇವರಿಬ್ಬರ ಹೊರತಾಗಿ ಬೇರೆ ಯಾವುದೇ ಟೀಂ ಇಂಡಿಯಾ ಕ್ರಿಕೆಟಿಗನೂ ಟಾಪ್ 10 ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.

ಬೌಲರ್ ಗಳ ಪಟ್ಟಿಯಲ್ಲಿ 797 ಅಂಕಗಳೊಂದಿಗೆ ವೇಗಿ ಜಸ್ಪ್ರೀತ್ ಬುಮ್ರಾ ಅಗ್ರ ಸ್ಥಾನದಲ್ಲಿದ್ದರೆ ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಬೌಲರ್ ಗಳ ಪಟ್ಟಿಯಲ್ಲಿ ಬುಮ್ರಾ ಬಿಟ್ಟರೆ ಭಾರತೀಯರ ಪೈಕಿ ಬೇರೆ ಯಾರೂ ಸ್ಥಾನ ಪಡೆದಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಹೊನಲು ಬೆಳಕಿನ ಟೆಸ್ಟ್ ಗೆ ಅಭ್ಯಾಸ ಆರಂಭಿಸಿದ ವಿರಾಟ್ ಕೊಹ್ಲಿ ಬಳಗ