Publish Date: Mon, 09 Oct 2023 (09:10 IST)
Updated Date: Mon, 09 Oct 2023 (09:20 IST)
ಹೈದರಾಬಾದ್: ಐಸಿಸಿ ಏಕದಿನ ವಿಶ್ವಕಪ್ ಕೂಟದಲ್ಲಿ ಇಂದು ನ್ಯೂಜಿಲೆಂಡ್ ಮತ್ತು ನೆದರ್ಲ್ಯಾಂಡ್ಸ್ ಈ ಕೂಟದ ಎರಡನೇ ಪಂದ್ಯವಾಡಲಿದೆ.
ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ. ಇದಕ್ಕೆ ಮೊದಲು ನ್ಯೂಜಿಲೆಂಡ್ ಮೊದಲ ಪಂದ್ಯವನ್ನು ಇಂಗ್ಲೆಂಡ್ ವಿರುದ್ಧ ಆಡಿತ್ತು. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿದ್ದ ಕಿವೀಸ್ ಭಾರೀ ಅಂತರದ ಗೆಲುವು ದಾಖಲಿಸಿತ್ತು. ಇದೀಗ ದುರ್ಬಲ ಎದುರಾಳಿಗಳ ವಿರುದ್ಧ ಮತ್ತೆ ಅಂತಹದ್ದೇ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ.
ಇನ್ನು, ನೆದರ್ಲ್ಯಾಂಡ್ಸ್ ಇದಕ್ಕೆ ಮೊದಲು ಪಾಕಿಸ್ತಾನದ ವಿರುದ್ಧ ಆಡಿ ಸೋಲು ಅನುಭವಿಸಿತ್ತು. ಕಳೆದ ಬೌಲಿಂಗ್ ನಲ್ಲಿ ನೆದರ್ಲ್ಯಾಂಡ್ಸ್ ಬೌಲಿಂಗ್ ಉತ್ತಮವಾಗಿತ್ತು. ಆದರೆ ಬ್ಯಾಟಿಂಗ್ ನಲ್ಲಿ ಸುಧಾರಿಸಬೇಕಿದೆ. ಪ್ರಬಲ ಎದುರಾಳಿಗಳ ವಿರುದ್ಧ ನೆದರ್ಲ್ಯಾಂಡ್ಸ್ ಹೇಗೆ ಪ್ರದರ್ಶನ ನೀಡುತ್ತದೆ ಎಂದು ಕಾದು ನೋಡಬೇಕಿದೆ. ಈ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗುವುದು.