Webdunia - Bharat's app for daily news and videos

Install App

ಏಕದಿನ ಪಂದ್ಯಗಳಿಗೆ ಗುಡ್‌ಬೈ ಘೋಷಿಸಿದ ಶಾಹಿದ್ ಆಫ್ರಿದಿ, ಮಿಸ್ಬಾ ಉಲ್ ಹಕ್

Webdunia
ಶನಿವಾರ, 21 ಮಾರ್ಚ್ 2015 (19:28 IST)
ಪಾಕಿಸ್ತಾನ ಕ್ರಿಕೆಟ್ ತಂಡದ  ನಾಯಕ ಮಿಸ್ಬಾ ಉಲ್ ಹಕ್ ಹಾಗೂ ಶಹೀದ್ ಅಫ್ರಿದಿ ಅವರು ಏಕದಿನ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.

ಶಹೀದ್ ಅಫ್ರಿದಿ ಅವರು ವಿಶ್ವಕಪ್ ಟೂರ್ನಿಯ ನಂತರ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವ ಬಗ್ಗೆ ಮೊದಲೇ ಘೋಷಿಸಿದ್ದರು. ಅದರೆ, ನಾಯಕ ಮಿಸ್ಬಾ ಉಲ್ ಹಕ್ ನಿವೃತ್ತಿ ಘೋಷಣೆ ಮಾಡಿರುವುದು ಅವರ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ. ಕೊನೆ ಪಂದ್ಯದಲ್ಲಿ ಮಿಸ್ಬಾ ಉಲ್ ಹಕ್ 34ರನ್ ಗಳಿಸಿ ಔಟ್ ಆಗಿದ್ದರು.

162 ಏಕದಿನ ಕ್ರಿಕೆಟ್ ಪಂದ್ಯಗಳನ್ನಾಡಿರುವ 40 ವರ್ಷ ವಯಸ್ಸಿನ ಮಿಸ್ಬಾ ಉಲ್ ಹಕ್ ಅವರು ಈ ವರೆಗೂ ಒಂದೇ ಒಂದು ಶತಕ ಸಿಡಿಸಿಲ್ಲ. ಇದರ ಹೊರತಾಗಿಯೂ ನಿವೃತ್ತಿ ಘೋಷಣೆ ಮಾಡಿರುವುದು ಅಭಿಮಾನಿಗಳಿಗೆ ಇನ್ನೂ ಬೇಸರ ತರಿಸಿದೆ. ಏಕದಿನ ಕ್ರಿಕೆಟ್ ನಲ್ಲಿ ಒಟ್ಟು 42 ಅರ್ಧಶತಕ ಬಾರಿಸಿರುವ ಮಿಸ್ಬಾ ಉಲ್ ಹಕ್ ಅವರು 5,122 ರನ್ ಗಳಿಸಿದ್ದಾರೆ. ಶತಕ ಬಾರಿಸದೆ 5,000 ಪ್ಲಸ್ ರನ್ ಗಳಿಸಿದ ಸಾಧನೆ ಮಾಡಿದ್ದಾರೆ. 2001ರಲ್ಲಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಪಂದ್ಯವಾಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಜಗತ್ತಿಗೆ ಮಿಸ್ಬಾ ಕಾಲಿಟ್ಟರು.

35 ವರ್ಷ ವಯಸ್ಸಿನ ಆಲ್ ರೌಂಡರ್ ಅಫ್ರಿದಿ ಅವರು 398 ಏಕದಿನ ಪಂದ್ಯಗಳನ್ನಾಡಿದ್ದು, ಒಟ್ಟು 8,064 ರನ್ ಗಳಿಸಿದ್ದಾರೆ. ಅಲ್ಲದೆ ಪ್ರಮುಖ ಸ್ಪಿನ್ನರ್ ಆಗಿಯೂ ಗುರುತಿಸಿಕೊಂಡಿದ್ದ ಅವರು 395 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇವಿಷ್ಟೇ ಅಲ್ಲದೆ ಸ್ವತಃ ಪಾಕಿಸ್ತಾನ ತಂಡದ ನಾಯಕರಾಗಿದ್ದ ಅವರು 2011ರ ವಿಶ್ವಕಪ್ ನಲ್ಲಿ ತಂಡವನ್ನು ಮುನ್ನಡೆಸಿದ್ದರು. ಮೊಹಾಲಿಯಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಚಾಂಪಿಯನ್ ಟೀಂ ಇಂಡಿಯಾ ವಿರುದ್ಧ ಅಫ್ರಿದಿ ಪಡೆ ಸೋಲು ಕಂಡಿತ್ತು.

ಮಿಸ್ಬಾ ಉಲ್ ಹಕ್ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಮುಂದುವರೆಯಲಿದ್ದು, ಅಫ್ರಿದಿ ಅವರು ಟಿ20 ಕ್ರಿಕೆಟ್‌ನಲ್ಲಿ ಆಡಲಿದ್ದಾರೆ. 1996ರಲ್ಲಿ ಶ್ರೀಲಂಕಾ ವಿರುದ್ಧ 37 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಅತಿ ವೇಗದ ಶತಕ ಸಾಧನೆ ಮಾಡಿದ ಆಟಗಾರ ಎಂಬ ಕೀರ್ತಿಗೆ ಅಫ್ರಿದಿ ಭಾಜನರಾಗಿದ್ದರು. ಕ್ರಿಕೆಟ್ ಜಗತ್ತಿನಲ್ಲಿ  'ಬೂಮ್ ಬೂಮ್ ಅಫ್ರಿದಿ' ಎಂದೇ ಖ್ಯಾತಿ ಪಡೆದಿದ್ದ ಅಫ್ರಿದಿ ಅವರ ಅನೇಕ ಏಕದಿನ ಇನ್ನಿಂಗ್ಸ್ ಗಳು ಕ್ರೀಡಾಭಿಮಾನಿಗಳ ಮೆಚ್ಚುಗೆ ಪಡೆದಿವೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments