ಹೈದರಾಬಾದ್: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸಾವನ್ನಪ್ಪಿದ ಸಂತ್ರಸ್ತರಿಗೆ ಇಂದು ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯಾಟಕ್ಕೂ ಮುನ್ನಾ ಆಟಗಾರರು ಹಾಗೂ ಪ್ರೇಕ್ಷಕರು ಒಂದು ನಿಮಿಷ ಮೌನಚಾರಣೆ ಸಲ್ಲಿಸಿದರು.
ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ಮುಂಬೈ ಇಂಡಿಯನ್ಸ್ (MI) ತಂಡದ ಆಟಗಾರರು ಸಾಲಾಗಿ ನಿಂತು ಒಂದು ನಿಮಿಷದ ಮೌನಾಚರಣೆಯಲ್ಲಿ ಪಾಲ್ಗೊಂಡರು. ಅದಲ್ಲದೆ ಗೌರವ ಸೂಚಕವಾಗಿ ಐಪಿಎಲ್‌ನಲ್ಲಿ ಎಂದಿನಂತಿರುವ ಚಿಯರ್‌ಲೀಡರ್‌ಗಳು ಅಥವಾ ಪಟಾಕಿಯನ್ನು ಇಂದು ನಿಷೇಧಿಸಲಾಗಿದೆ.
ಟಾಸ್ ವೇಳೆ ಉಭಯ ತಂಡದ ನಾಯಕರು ಈ ದಾಳಿಯಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದರು. ಅದಲ್ಲದೆ ತೋಳಿಗೆ ಕಪ್ಪು ಪಟ್ಟಿ ಕಟ್ಟಿ, ಭಯೋತ್ಪಾದಕ ದಾಳಿಯನ್ನು ಖಂಡಿಸುತ್ತಾರೆ.
ಮಂಗಳವಾರ, ಪಹಲ್ಗಾಮ್‌ನ ಗಿರಿಧಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯು ಅನೇಕ ಜನರನ್ನು ಬಲಿ ತೆಗೆದುಕೊಂಡಿತು. ಸಿಕ್ಕಿರುವ ಮಾಹಿತಿ ಪ್ರಕಾರ ಇದೀಗ ಸಾವಿನ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಅನೇಕರು ಗಾಯಗೊಂಡರು.