ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ನಾಯಕ, ದಿಗ್ಗಜ ಬ್ಯಾಟ್ಸ್ ಮನ್ ಇಂಜಮಾಮ್ ಉಲ್ ಹಕ್ ಹೃದಯಾಘಾತಕ್ಕೊಳಗಾಗಿದ್ದಾರೆ.
ನಿನ್ನೆ ಅವರನ್ನು ಲಾಹೋರ್ ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಯಶಸ್ವಿಯಾಗಿ ಆಂಜಿಯೋಪ್ಲಾಸ್ಟಿ ಸರ್ಜರಿ ಮಾಡಲಾಗಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.
51 ವರ್ಷದ ಇಂಜಮಾಮ್ ಕಳೆದ ಮೂರು ದಿನಗಳಿಂದ ಲಘುವಾಗಿ ಎದೆನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹೀಗಾಗಿ ಅವರು ಪರೀಕ್ಷೆಗೊಳಗಾಗಿದ್ದರು. ಇದೀಗ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆದಿದ್ದು, ಅವರು ಆರೋಗ್ಯವಾಗಿದ್ದಾರೆ ಎಂದು ಅವರ ವಕ್ತಾರರು ತಿಳಿಸಿದ್ದಾರೆ.