ಐಶ್ವರ್ಯಾ ರೈ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಪಾಕ್ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್

Webdunia
ಮಂಗಳವಾರ, 14 ನವೆಂಬರ್ 2023 (17:20 IST)
ಇಸ್ಲಾಮಾಬಾದ್: ಬಾಲಿವುಡ್ ತಾರೆ, ಬಚ್ಚನ್ ಸೊಸೆ ಐಶ್ವರ್ಯಾ ರೈ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಪಾಕ್ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ವಿರುದ್ಧ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ಕಳಪೆ ನಿರ್ವಹಣೆ ಕುರಿತು ಮಾತನಾಡುವಾಗ ಅಬ್ದುಲ್ ರಜಾಕ್, ಬಾಲಿವುಡ್ ತಾರೆ ಐಶ್ವರ್ಯಾ ರೈ ಹೆಸರನ್ನು ಉಲ್ಲೇಖಿಸಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

ಪಾಕ್ ಕ್ರಿಕೆಟ್ ಮಂಡಳಿ ಆಟಗಾರರ ಬಗ್ಗೆ ಕೇರ್ ಮಾಡುತ್ತಿಲ್ಲ ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವಾಗ ರಜಾಕ್ ‘ ನನ್ನ ಪ್ರಕಾರ ನಾವು ಆಟಗಾರರ ಗುಣಮಟ್ಟ ಸುಧಾರಿಸುವತ್ತ ಗಮನಹರಿಸುತ್ತಿಲ್ಲ. ಐಶ್ವರ್ಯಾ ರೈ ಅವರನ್ನು ಮದುವೆಯಾದರೆ ಬುದ್ಧಿವಂತ, ಒಳ್ಳೆಯ ಮಕ್ಕಳು ಹುಟ್ಟಬೇಕೆಂದಿಲ್ಲ. ಅದೇ ರೀತಿ ಗುಣಮಟ್ಟ ಸುಧಾರಿಸದೇ ಉತ್ತಮ ಫಲಿತಾಂಶ ಸಿಗದು’ ಎಂದಿದ್ದಾರೆ. ಅವರು ಹೀಗೆ ಹೇಳುವಾಗ ಪಕ್ಕದಲ್ಲೇ ಕೂತಿದ್ದ ಶಾಹಿದ್ ಅಫ್ರಿದಿ ಸೇರಿದಂತೆ ಇತರ ಮಾಜಿ ಕ್ರಿಕೆಟಿಗರು ಚಪ್ಪಾಳೆ ತಟ್ಟಿದ್ದಾರೆ.

ಪಾಕ್ ಕ್ರಿಕೆಟಿಗರ ಈ ವರ್ತನೆ ನೆಟ್ಟಿಗರನ್ನು ಕೆರಳಿಸಿದೆ. ಪಾಕಿಸ್ತಾನದಲ್ಲಿ ಮಹಿಳೆಯರಿಗೆ ಎಷ್ಟು ಗೌರವ ನೀಡಲಾಗುತ್ತಿದೆ ಎಂದು ಇದರಲ್ಲಿಯೇ ಗೊತ್ತಾಗುತ್ತದೆ ಎಂದು ಕೆಲವರು ಹೇಳಿದ್ದರೆ, ಮತ್ತೆ ಕೆಲವರು ಇನ್ನೂ ಎಷ್ಟು ಕೆಳ ಮಟ್ಟಕ್ಕಿಳಿಯುತ್ತೀರಿ ಎಂದು ಚಾಟಿ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments