Publish Date: Fri, 22 Mar 2019 (09:14 IST)
Updated Date: Fri, 22 Mar 2019 (09:17 IST)
ನವದೆಹಲಿ: ಪುಲ್ವಾಮಾ ದಾಳಿಯ ಬಳಿಕ ಭಾರತ-ಪಾಕಿಸ್ತಾನ ನಡುವಿನ ಸಂಬಂಧ ಸಂಪೂರ್ಣ ಹಾಳಾಗಿದ್ದು, ಇದು ಕ್ರಿಕೆಟ್ ಮೇಲೂ ಪರಿಣಾಮ ಬೀರಿತ್ತು.
ಪುಲ್ವಾಮಾ ದಾಳಿ ಸಂದರ್ಭ ಪಾಕ್ ಕ್ರಿಕೆಟ್ ಪ್ರೀಮಿಯರ್ ಲೀಗ್ ನ್ನು ಭಾರತದಲ್ಲಿ ಪ್ರಸಾರ ಮಾಡದೇ ಇದ್ದಿದ್ದಕ್ಕೆ ಇದೀಗ ಪಾಕಿಸ್ತಾನವೂ ಭಾರತದ ವಿರುದ್ಧ ಮುಯ್ಯಿಗೆ ಮುಯ್ಯಿ ತೀರಿಸಲು ಮುಂದಾಗಿದೆ.
ಭಾರತದಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ನೇರಪ್ರಸಾರವನ್ನು ಪಾಕಿಸ್ತಾನದಲ್ಲಿ ಪ್ರಸಾರ ಮಾಡದೇ ಇರಲು ಪಾಕ್ ಸರ್ಕಾರ ತೀರ್ಮಾನಿಸಿದೆ. ‘ಪುಲ್ವಾಮಾ ದಾಳಿಯ ಬಳಿಕ ಪಾಕ್ ಕ್ರಿಕೆಟ್ ಲೀಗ್ ಪಂದ್ಯಾವಳಿಗಳನ್ನು ಪ್ರಸಾರ ಮಾಡುವ ವಿಚಾರದಲ್ಲಿ ಭಾರತೀಯ ಕಂಪನಿಗಳು ಮತ್ತು ಸರ್ಕಾರ ನಡೆದುಕೊಂಡ ರೀತಿ ಇನ್ನೂ ಹಸಿಯಾಗಿದೆ. ಹೀಗಾಗಿ ನಾವೂ ಕೂಡಾ ನಮ್ಮ ದೇಶದಲ್ಲಿ ಐಪಿಎಲ್ ಪ್ರಸಾರ ಮಾಡುತ್ತಿಲ್ಲ’ ಎಂದು ಪಾಕ್ ಮಾಹಿತಿ ಸಚಿವ ಫವಾದ್ ಚೌಧರಿ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ