ದುಬೈ: ಚಾಂಪಿಯನ್ಸ್ ಟ್ರೋಫಿಯಲ್ಲಿ ಮುಖಾಮುಖಿಯಾಗಲಿರುವ ಟೀಂ ಇಂಡಿಯಾ ಆಟಗಾರರನ್ನು ತಬ್ಬಿಕೊಳ್ಳೋದು, ಕೈ ಕುಲುಕುವುದು ಯಾವುದೂ ಮಾಡಬೇಡಿ. ಹೀಗಂತ ಪಾಕಿಸ್ತಾನ ಕ್ರಿಕೆಟಿಗರಿಗೆ ಎಚ್ಚರಿಕೆ ನೀಡಲಾಗಿದೆ!
ಈ ಬಾರಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುತ್ತಿದೆ. ಕೊನೆಗೂ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಬಹುದು. ತಮ್ಮ ನೆಲದಲ್ಲಿ ಭಾರತ-ಪಾಕ್ ಪಂದ್ಯ ವೀಕ್ಷಿಸಬಹುದು ಎಂದು ಪಾಕಿಸ್ತಾನದ ಅಭಿಮಾನಿಗಳು ಕಾಯುತ್ತಿದ್ದರು.
ಆದರೆ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಬಿಸಿಸಿಐ ಯಾವುದೇ ಕಾರಣಕ್ಕೂ ಪಾಕಿಸ್ತಾನಕ್ಕೆ ಟೀಂ ಇಂಡಿಯಾ ಕಳುಹಿಸಲು ಒಪ್ಪಲಿಲ್ಲ. ಹೀಗಾಗಿ ಭಾರತ ಆಡುವ ಪಂದ್ಯಗಳು ದುಬೈನಲ್ಲಿ ನಡೆಯುತ್ತಿದೆ. ಇದು ಪಾಕ್ ಕ್ರಿಕೆಟಿಗರಿಗೆ ಕೋಪಕ್ಕೆ ಕಾರಣವಾಗಿದೆ.
ಈ ಬಗ್ಗೆ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಪಾಕ್ ಅಭಿಮಾನಿಗಳು ಯಾವುದೇ ಕಾರಣಕ್ಕೂ ಟೀಂ ಇಂಡಿಯಾ ಆಟಗಾರರನ್ನು ತಬ್ಬಿಕೊಳ್ಳೋದು ಎಲ್ಲಾ ಇಟ್ಟುಕೊಳ್ಳಬೇಡಿ ಎಂದು ತಮ್ಮ ಕ್ರಿಕೆಟಿಗರಿಗೆ ಎಚ್ಚರಿಕೆ ನೀಡಿದ್ದಾರೆ.