ಮ್ಯಾಚ್ ಲೈವ್ ಇತ್ತು ಬಚಾವ್, ಇಲ್ಲದಿದ್ರೆ ನಾವೇ ಗೆದ್ದಿದ್ದು ಅಂತ ಹೇಳ್ತಿತ್ತು ಪಾಕಿಸ್ತಾನ

Krishnaveni K
ಸೋಮವಾರ, 15 ಸೆಪ್ಟಂಬರ್ 2025 (11:42 IST)
Photo Credit: X
ದುಬೈ:  ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಲೈವ್ ಆಗಿ ಟೆಲಿಕಾಸ್ಟ್ ಆಗಿದ್ದು ಒಳ್ಳೇದಾಯ್ತು. ಇಲ್ಲಾಂದ್ರೆ ನಾವೇ ಗೆದ್ದಿದ್ದು ಎಂದು ಪಾಕಿಸ್ತಾನ ಹೇಳಿಕೊಳ್ಳುತ್ತಿತ್ತು.

ಹೀಗಂತ ಈಗ ಪಾಕಿಸ್ತಾನ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೋಲ್ ಆಗುತ್ತಿದೆ. ನಿನ್ನೆಯ ಪಂದ್ಯವನ್ನು ಭಾರತ 7  ವಿಕೆಟ್ ಗಳಿಂದ ಗೆದ್ದುಕೊಂಡಿತು. ಬೌಲಿಂಗ್, ಬ್ಯಾಟಿಂಗ್ ಎರಡರಲ್ಲೂ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿತ್ತು. ಪಹಲ್ಗಾಮ್ ದಾಳಿ ನಡೆದ ಬಳಿಕ ನಡೆಯುತ್ತಿರುವ ಮೊದಲ ಭಾರತ-ಪಾಕಿಸ್ತಾನ ಪಂದ್ಯ ಇದಾಗಿತ್ತು.

ಹೀಗಾಗಿ ಸಹಜವಾಗಿಯೇ ಅಭಿಮಾನಿಗಳಲ್ಲಿ ಆಕ್ರೋಶವಿತ್ತು. ಪಂದ್ಯ ಬಹಿಷ್ಕಾರಕ್ಕೂ ಕರೆ ನೀಡಲಾಗಿತ್ತು. ಆದರೆ ಅಂತೂ ಇಂತೂ ಪಂದ್ಯ ನಡೆದು ಭಾರತ ಗೆಲುವು ಸಾಧಿಸಿದ ಬಳಿಕ ಟೀಂ ಇಂಡಿಯಾ ಮಾಜಿ ವೇಗಿ ಇರ್ಫಾನ್ ಪಠಾಣ್ ಎದುರಾಳಿಗಳನ್ನು ಸಖತ್ ಟ್ರೋಲ್ ಮಾಡಿದ್ದಾರೆ.

‘ಸದ್ಯ ಈ ಪಂದ್ಯ ಲೈವ್ ಆಗಿತ್ತು. ಇಲ್ಲಾಂದ್ರೆ ನಾವೇ ಗೆದ್ದಿದ್ದು ಎಂದು ಪಾಕಿಸ್ತಾನ ಹೇಳಿಕೊಂಡು ತಿರುಗಾಡುತ್ತಿತ್ತು’ ಎಂದಿದ್ದಾರೆ. ಆಪರೇಷನ್ ಸಿಂಧೂರ್ ಸಮಯದಲ್ಲೂ ಸೋತು ಮಣ್ಣು ಮಕ್ಕಿದ್ರೂ ನಾವೇ ಗೆದ್ದಿದ್ದು ಎಂದು ಪಾಕಿಸ್ತಾನ ಬೀದಿಯಲ್ಲಿ ಮೆರವಣಿಗೆ ಮಾಡಿತ್ತು. ಇದೇ ಕಾರಣಕ್ಕೆ ಇರ್ಫಾನ್ ಪಠಾಣ್ ಹಾಗೂ ಸಾಕಷ್ಟು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಇದೇ ರೀತಿ ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಮೈದಾನದಲ್ಲಿ ಸ್ಪ್ರೇ ಮಾಡಿದ ಪಾಕಿಸ್ತಾನ ಆಟಗಾರ್ತಿಯರು, ಪಂದ್ಯ ಸ್ಥಗಿತವಾಗಿದ್ದೇಕೆ ಗೊತ್ತಾ

INDW vs PAKW: ಟಾಸ್ ವೇಳೆ ಭಾರತಕ್ಕೆ ಮೋಸ ಮಾಡಿದ ಪಾಕಿಸ್ತಾನ ನಾಯಕಿ: ವಿಡಿಯೋ ವೈರಲ್

INDWvsPAKW: ಕೈ ಕುಲುಕುವುದು ಬಿಡಿ, ಮುಖವೂ ನೋಡದ ಹರ್ಮನ್ ಪ್ರೀತ್ ಕೌರ್

ಸೂರ್ಯಕುಮಾರ್ ಯಾದವ್ ನಾಯಕತ್ವಕ್ಕೂ ಸದ್ಯದಲ್ಲೇ ಕೊಕ್

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೇ ಟೀಂ ಇಂಡಿಯಾದಲ್ಲಿ ಸ್ಥಾನ ಗ್ಯಾರಂಟಿ ಇಲ್ಲ

ಮುಂದಿನ ಸುದ್ದಿ
Show comments