ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ರಾಂಚಿ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಭಾರತೀಯ ಸೇನೆಯ ಗೌರವಾರ್ಥ ಮಿಲಿಟರಿ ಕ್ಯಾಪ್ ಧರಿಸಿದ್ದು, ಇದೀಗ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಕೆಂಗಣ್ಣಿಗೆ ಗುರಿಯಾಗಿದೆ.
ಇತ್ತೀಚೆಗೆ ಪುಲ್ವಾಮಾದಲ್ಲಿ ನಡೆದ ಉಗ್ರ ದಾಳಿಯಲ್ಲಿ ಹುತಾತ್ಮರಾದ ಯೋಧರ ಸ್ಮರಣಾರ್ಥ ಟೀಂ ಇಂಡಿಯಾ ಮಿಲಿಟರಿ ಕ್ಯಾಪ್ ಧರಿಸಿ ಆಡಿತ್ತು. ಆದರೆ ಇದರ ಬಗ್ಗೆ ಇದೀಗ ಪಾಕಿಸ್ತಾನ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಗೆ ದೂರು ನೀಡಿದೆ.
ಭಾರತ ಕ್ರೀಡೆಯಲ್ಲಿ ರಾಜಕೀಯ ಬೆರೆಸುತ್ತಿದೆ. ರಾಜಕೀಯ ವಿಚಾರವನ್ನು ಕ್ರೀಡೆಯಲ್ಲಿ ಎಳೆದುತರುತ್ತಿದೆ ಎಂದು ಪಾಕಿಸ್ತಾನ ಆರೋಪಿಸಿದ್ದು, ಮಿಲಿಟರಿ ಕ್ಯಾಪ್ ಧರಿಸಿದ ಟೀಂ ಇಂಡಿಯಾ ವಿರುದ್ಧ ಐಸಿಸಿ ಕ್ರಮ ಕೈಗೊಳ್ಳಬೇಕು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಶಿ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಫವಾದ್ ಚೌಧರಿ ಆಗ್ರಹಿಸಿದ್ದಾರೆ.
ಒಂದು ವೇಳೆ ಐಸಿಸಿ ಕ್ರಮ ಕೈಗೊಳ್ಳದಿದ್ದರೆ ನಾವೂ ಕಪ್ಪು ಪಟ್ಟಿ ಧರಿಸಿ ಆಡಬೇಕಾಗುತ್ತದೆ ಎಂದು ಇಬ್ಬರೂ ಸಚಿವರು ಐಸಿಸಿಗೆ ಎಚ್ಚರಿಕೆ ನೀಡಿದ್ದಾರೆ. ಆ ಮೂಲಕ ವಿಶ್ವಕ್ಕೇ ಕಾಶ್ಮೀರ ವಿಚಾರದಲ್ಲಿ ಭಾರತ ಎಸಗುತ್ತಿರುವ ದೌರ್ಜನ್ಯವನ್ನು ತೋರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ