ದುಬೈ: ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಸೋಲರಿಯದ ಸರದಾರನಾಗಿ ಮೆರೆಯುತ್ತಿದೆ. ಇದು ಆ ತಂಡಕ್ಕೆ ಅದೃಷ್ಟವಾಗಿ ಪರಿಣಮಿಸಿದೆ.
ಉಗ್ರರ ತಾಣವಾಗಿರುವ ಪಾಕಿಸ್ತಾನಕ್ಕೆ ಪ್ರಮುಖ ಕ್ರಿಕೆಟ್ ರಾಷ್ಟ್ರಗಳು ಪ್ರವಾಸ ಮಾಡಲು ಹಿಂದೇಟು ಹಾಕುತ್ತವೆ. ಆದರೆ ಇದೀಗ ವಿಶ್ವಕಪ್ ನಲ್ಲಿ ಉತ್ತಮ ಪ್ರದರ್ಶನ ತೋರಿದ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡ ಪಾಕಿಸ್ತಾನ ಪ್ರವಾಸ ಮಾಡುವ ನಿರ್ಧಾರಕ್ಕೆ ಬಂದಿದೆ.
ಬರೋಬ್ಬರಿ 24 ವರ್ಷಗಳ ಬಳಿಕ ಆಸ್ಟ್ರೇಲಿಯಾ ಪಾಕಿಸ್ತಾನದಲ್ಲಿ ಕ್ರಿಕೆಟ್ ಸರಣಿ ಆಡಲು ಪ್ರವಾಸ ಬೆಳೆಸಲಿದೆ. ಮುಂದಿನ ವರ್ಷ ಮಾರ್ಚ್ ನಲ್ಲಿ ಉಭಯ ತಂಡಗಳ ನಡುವೆ ಟೆಸ್ಟ್, ಏಕದಿನ ಮತ್ತು ಟಿ20 ಸರಣಿ ನಡೆಯಲಿದೆ. ಇದಕ್ಕೂ ಮೊದಲು ಆಸ್ಟ್ರೇಲಿಯಾ ತನ್ನ ಭದ್ರತಾ ನಿಯೋಗವನ್ನು ಪಾಕಿಸ್ತಾನಕ್ಕೆ ಕಳುಹಿಸಿಕೊಡಲಿದೆಯಂತೆ. ಅಂತೂ ಇಂತೂ ಪಾಕಿಸ್ತಾನದಲ್ಲಿ ಇದೀಗ ಮತ್ತೆ ಕ್ರಿಕೆಟ್ ಮರಳುತ್ತಿದೆ.