ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

Krishnaveni K
ಶುಕ್ರವಾರ, 28 ನವೆಂಬರ್ 2025 (12:12 IST)
ಮುಂಬೈ: ನಿಂತು ಹೋಗಿದ್ದ ಭಾರತೀಯ ಮಹಿಳಾ ಕ್ರಿಕೆಟ್ ತಾರೆ ಸ್ಮೃತಿ ಮಂಧಾನ ಮದುವೆ ಮತ್ತೆ ನಡೆಯುತ್ತಾ? ಈ ಅನುಮಾನಗಳಿಗೆ ಪಾಲಾಶ್ ಮುಚ್ಚಲ್ ತಾಯಿ ಸ್ಪಷ್ಟನೆ ನೀಡಿದ್ದಾರೆ.
 

ಸ್ಮೃತಿ ಮಂಧಾನ-ಪಾಲಾಶ್ ಮದುವೆ ದಿಡೀರ್ ರದ್ದಾದ ಬೆನ್ನಲ್ಲೇ ಸಾಕಷ್ಟು ಊಹಾಪೋಹಗಳು ಹುಟ್ಟಿಕೊಂಡಿದ್ದವು. ಮೊದಲು ಸ್ಮೃತಿ ತಂದೆಗೆ ಹೃದಯಾಘಾತವಾಗಿದ್ದರಿಂದ ಮದುವೆ ನಿಂತಿದೆ ಎನ್ನಲಾಗಿತ್ತು. ಆದರೆ ನಂತರ ಪಾಲಾಶ್ ಬೇರೆ ಹುಡುಗಿಯೊಂದಿಗೆ ಚ್ಯಾಟಿಂಗ್ ಮಾಡಿದ್ದ ವಿಚಾರಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಇದರ ನಡುವೆ ಇಬ್ಬರ ಮದುವೆ ನಡೆಯಲ್ಲ. ಬ್ರೇಕಪ್ ಆಗಿದೆ ಎಂದೆಲ್ಲಾ ಸುದ್ದಿಗಳು ಹರಿದಾಡಿದ್ದವು. ಅದರ ನಡುವೆ ಈಗ ಪಾಲಾಶ್ ಕೂಡಾ ಒತ್ತಡಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದರು.

ಇದೀಗ ಪಾಲಾಶ್ ತಾಯಿ ಮಾಧ್ಯಮಗಳಿಗೆ ಮದುವೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ಸ್ಮೃತಿ ಮತ್ತು ಪಾಲಾಶ್ ಇಬ್ಬರೂ ಬೇಸರದಲ್ಲಿದ್ದಾರೆ. ಪಾಲಾಶ್ ತನ್ನ ಪತ್ನಿಯೊಂದಿಗೆ ಮನೆಗೆ ಬರಬಹುದು ಎಂದು ಕನಸು ಕಂಡಿದ್ದ. ನಾನೂ ನನ್ನ ಸೊಸೆಯನ್ನು ಬರಮಾಡಿಕೊಳ್ಳಲು  ವಿಶೇಷ ಪ್ಲ್ಯಾನ್ ಮಾಡಿಕೊಂಡಿದ್ದೆ. ಎಲ್ಲಾ ಸರಿ ಹೋಗುತ್ತೆ, ಸದ್ಯದಲ್ಲೇ ಇಬ್ಬರೂ ಮದುವೆಯಾಗುತ್ತಾರೆ’ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ ಸ್ಮೃತಿ ಕಡೆಯಿಂದ ಇದುವರೆಗೆ ಯಾವುದೇ ಸ್ಪಷ್ಟನೆ ಬಂದಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments