Publish Date: Tue, 22 May 2018 (12:00 IST)
Updated Date: Tue, 22 May 2018 (12:12 IST)
ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ರೀವಾ ಜಡೇಜಾ ಪತ್ನಿ ಕಾರು ಚಲಾಯಿಸುವಾಗ ಸಣ್ಣ ಅಪಘಾತ ಮಾಡಿಕೊಂಡಿದ್ದು, ಇದಕ್ಕೆ ಅವರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆಂದು ಪ್ರತ್ಯಕ್ಷದರ್ಶಿಗಳು ಹೇಳಿರುವುದಾಗಿ ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.
ಗುಜರಾತ್ ನ ಜಮ್ನಾನಗರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಜಡೇಜಾ ಪತ್ನಿ ಸಾಗುತ್ತಿದ್ದ ಕಾರು ಪೊಲೀಸ್ ಅಧಿಕಾರಿಯೊಬ್ಬರ ಬೈಕ್ ಗೆ ಗುದ್ದಿದೆ. ಇದರಿಂದ ರೊಚ್ಚಿಗೆದ್ದ ಪೊಲೀಸ್ ಅಧಿಕಾರಿ ರೀವಾ ಮೇಲೆ ದೈಹಿಕ ಹಲ್ಲೆ ನಡೆಸಿದರು ಎಂದು ಪ್ರತ್ಯಕ್ಷದರ್ಶಿಗಳು ಮಾಧ್ಯಮಗಳಿಗೆ ಹೇಳಿದ್ದಾರೆ.
ಪೊಲೀಸ್ ಅಧಿಕಾರಿ ರೀವಾ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಆಕೆಯ ಕೂದಲು ಹಿಡಿದೆಳೆಯುತ್ತಿದ್ದ. ಈ ಸಂದರ್ಭದಲ್ಲಿ ಸ್ಥಳೀಯರು ಆಕೆಯ ನೆರವಿಗೆ ಬಂದರು ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಸೆಜುಲ್ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.