ಕೇಪ್ ಟೌನ್: ಆಸ್ಟ್ರೇಲಿಯಾ ವಿರುದ್ಧ ಇಂದು ಮಹಿಳಾ ಟಿ20 ವಿಶ್ವಕಪ್ ನಲ್ಲಿ ಸೆಮಿಫೈನಲ್ ಪಂದ್ಯವಾಡಲಿರುವ ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಶಾಕ್ ಎದುರಾಗಿದೆ.
ಸೆಮಿಫೈನಲ್ ಪಂದ್ಯಕ್ಕೆ ಕೆಲವೇ ಕ್ಷಣಗಳ ಮೊದಲು ಪ್ರಮುಖ ಆಲ್ ರೌಂಡರ್ ಪೂಜಾ ವಸ್ತ್ರಾಕರ್ ಅನಾರೋಗ್ಯಕ್ಕೀಡಾಗಿದ್ದು, ಇಂದಿನ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.
ಅವರ ಬದಲಿಗೆ ಸ್ನೇಹಾ ರಾಣಾ ತಂಡವನ್ನು ಕೂಡಿಕೊಂಡಿದ್ದಾರೆ. ಪೂಜಾಗೆ ಶ್ವಾಸಕೋಶ ಸೋಂಕು ಸಮಸ್ಯೆಯಾಗಿದ್ದು, ತಂಡದಿಮದ ಹೊರಬಂದಿದ್ದಾರೆ.