Publish Date: Fri, 19 Mar 2021 (11:20 IST)
Updated Date: Fri, 19 Mar 2021 (11:25 IST)
ಮುಂಬೈ: ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಬಳಿಕ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ಕನ್ನಡಿಗ ಬೌಲರ್ ಪ್ರಸಿದ್ಧ ಕೃಷ್ಣಗೆ ಕರೆ ನೀಡಲಾಗಿದೆ.
ದೇಶೀಯ ಕ್ರಿಕೆಟ್ ನಲ್ಲಿ ಮಿಂಚಿರುವ ಪ್ರಸಿದ್ಧ ಕೃಷ್ಣ ಐಪಿಎಲ್ ನಲ್ಲೂ ಗಮನಾರ್ಹ ಪ್ರದರ್ಶನ ನೀಡಿದ್ದರು. ಈ ಹಿನ್ನಲೆಯಲ್ಲಿ ಯುವ ಪ್ರತಿಭೆಗೆ ರಾಷ್ಟ್ರೀಯ ತಂಡದಲ್ಲಿ ಅವಕಾಶ ನೀಡಲಾಗಿದೆ. ಮಾರ್ಚ್ 23 ರಿಂದ ಏಕದಿನ ಸರಣಿ ಆರಂಭವಾಗಲಿದೆ. ಏಕದಿನ ತಂಡ ಇಂತಿದೆ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಶಬ್ನಂ ಗಿಲ್, ಶ್ರೇಯಸ್ ಐಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಕೃನಾಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಶ್ರಾದ್ಧೂಲ್ ಠಾಕೂರ್.