Publish Date: Sun, 24 Jul 2022 (09:10 IST)
Updated Date: Sun, 24 Jul 2022 (09:20 IST)
ಟ್ರಿನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ದ್ವಿತೀಯ ಏಕದಿನ ಪಂದ್ಯ ನಡೆಯಲಿದ್ದು, ತಂಡದಲ್ಲಿ ಕೆಲವು ಬದಲಾವಣೆಗಳಾಗುವ ಸಾಧ‍್ಯತೆಯಿದೆ.
ಕನ್ನಡಿಗ ಪ್ರಸಿದ್ಧ ಕೃಷ್ಣ ಕಳೆದ ಕೆಲವು ಪಂದ್ಯಗಳಲ್ಲಿ ಅವಕಾಶ ಸಿಕ್ಕರೂ ಸೂಕ್ತವಾಗಿ ಬಳಸಿಕೊಂಡಿಲ್ಲ. ಇಂಗ್ಲೆಂಡ್ ಸರಣಿಯಲ್ಲೂ ಗಮನಾರ್ಹ ಪ್ರದರ್ಶನ ನೀಡದ ಪ್ರಸಿದ್ಧ ಕೃಷ್ಣ ವಿಂಡೀಸ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲೂ ವಿಕೆಟ್ ಕೀಳಲು ವಿಫಲರಾಗಿದ್ದರು. ಹೀಗಾಗಿ ಅವರಿಗೆ ಕೊಕ್ ಕೊಟ್ಟು ಆವೇಶ್ ಖಾನ್ ಗೆ ಅವಕಾಶ ಕೊಟ್ಟರೂ ಅಚ್ಚರಿಯಿಲ್ಲ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ‍್ಯತೆ ಕಡಿಮೆ.