ಇದೀಗ ಖಚಿತ! ಮೊದಲ ಟೆಸ್ಟ್ ನಿಂದ ಪೃಥ್ವಿ ಶಾ ಔಟ್!

Webdunia
ಶುಕ್ರವಾರ, 30 ನವೆಂಬರ್ 2018 (10:52 IST)
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಡಿಸೆಂಬರ್ 6 ರಿಂದ ಅಡಿಲೇಡ್ ನಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಪೃಥ್ವಿ ಶಾ ಔಟ್ ಆಗಿದ್ದಾರೆ.


ಅಭ್ಯಾಸ ಪಂದ್ಯದಲ್ಲಿ ಮೊಣಕಾಲು ಉಳುಕಿಸಿಕೊಂಡಿದ್ದ ಪೃಥ್ವಿ ಶಾರನ್ನು ಮೈದಾನದಿಂದ ಎತ್ತಿಕೊಂಡು ಪೆವಿಲಿಯನ್ ಗೆ ಕರೆದೊಯ್ಯಬೇಕಾಯಿತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದ ವೈದ್ಯಕೀಯ ತಂಡ ಸ್ಕ್ಯಾನಿಂಗ್ ನಡೆಸಿ ಗಾಯದ ಗಂಭೀರತೆ ಪರೀಕ್ಷೆ ನಡೆಸಿತ್ತು.

ಇದೀಗ ಅವರ ಗಾಯ ಗಂಭೀರವಾಗಿದ್ದು ಮೊದಲ ಟೆಸ್ಟ್ ನಿಂದ ಹೊರಗುಳಿಯಲಿದ್ದಾರೆ. ಅಭ್ಯಾಸ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ನಡೆಸಿ ಭರವಸೆ ಮೂಡಿಸಿದ್ದ ಪೃಥ್ವಿ ಶಾ ಮೇಲೆ ಭಾರೀ ನಿರೀಕ್ಷೆಯಿತ್ತು. ಆದರೆ ಅದೇನು ದುರಾದೃಷ್ಟವೋ ಮೊದಲ ಟೆಸ್ಟ್ ನಿಂದಲೇ ಹೊರಗುಳಿಯಬೇಕಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಶತಕದ ಸ್ಟೈಲ್ ಕಾಪಿ ಮಾಡಿದ ಬಾಬರ್ ಅಜಮ್: ಸ್ವಂತಿಕೆನೇ ಇಲ್ವಾ ಎಂದ ನೆಟ್ಟಿಗರು video

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

ಮುಂದಿನ ಸುದ್ದಿ
Show comments