Publish Date: Wed, 28 Mar 2018 (08:55 IST)
Updated Date: Wed, 28 Mar 2018 (08:56 IST)
ಚೆನ್ನೈ: ಆಸ್ಟ್ರೇಲಿಯಾ ಆಟಗಾರರು ಇದೀಗ ಚೆಂಡು ವಿರೂಪ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಶೇಮ್ ಶೇಮ್ ಎನಿಸಿಕೊಳ್ಳುತ್ತಿದ್ದರೆ, ಟೀಂ ಇಂಡಿಯಾ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ!
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರವಿಚಂದ್ರನ್ ಅಶ್ವಿನ್ ‘ಇದೆಲ್ಲಾ ಪಂದ್ಯದ ಆವೇಶದಲ್ಲಿ ನಡೆದು ಹೋಗುತ್ತದೆ. ಆದರೆ ಆಟಗಾರರು ತಾವು ಸಾರ್ವಜನಿಕರ ಕಣ್ಣಿಗೆ ಕಾಣಿಸಿಕೊಳ್ಳುತ್ತಿದ್ದೇವೆ ಎಂಬ ಎಚ್ಚರಿಕೆ ಹೊಂದಿರಬೇಕು’ ಎಂದು ಅಭಿಪ್ರಾಯಪಟ್ಟಿದ್ದಾರೆ.
‘ತಂತ್ರಜ್ಞಾನ ಮುಂದುವರಿದಿರುವುದರಿಂದ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಒಂದು ವೇಳೆ ತಂತ್ರಜ್ಞಾನ ಇಷ್ಟು ಮುಂದುವರಿಯದೇ ಇದ್ದಿದ್ದರೆ ಇಂತಹ ಅದೆಷ್ಟೋ ಘಟನೆಗಳು ಅರಿವಿಲ್ಲದೇ ನಡೆದುಹೋಗುತ್ತಿದ್ದವು’ ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ