ಟೀಂ ಇಂಡಿಯಾ ತಂಡದ ಸ್ಟಾರ್ ಬೌಲರ್‌ಗಳಾದ ಆರ್.ಅಶ್ವಿನ್, ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಶಮಿಯವರಿಗೆ ಮೊದಲ ಮೂರು ಏಕದಿನ ಪಂದ್ಯಗಳಿಂದ ವಿಶ್ರಾಂತಿ ನೀಡಲಾಗಿದೆ.
ನ್ಯೂಜಿಲೆಂಡ್ ವಿರುದ್ಧ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದಾಗ್ಯೂ ಯಾಕೆ ಸ್ಟಾರ್ ಬೌಲರ್‌ಗಳಿಗೆ ವಿಶ್ರಾಂತಿ ನೀಡಲಾಗಿದೆ ಎನ್ನುವುದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.
2016-2017ರ ಸಾಲಿನಲ್ಲಿ 11 ಟೆಸ್ಟ್ ಪಂದ್ಯಗಳು ಆಡಬೇಕಾಗಿರುವ ಹಿನ್ನೆಲೆಯಲ್ಲಿ ಪ್ರಮುಖ ಬೌಲರ್‌ಗಳಿಗೆ ಅಕ್ಟೋಬರ್ 16 ರಿಂದ ನಡೆಯಲಿರುವ ಮೊದಲ ಮೂರು ಏಕದಿನ ಪಂದ್ಯಗಳಿಂದ ವಿಶ್ರಾಂತಿ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಐಸಿಸಿ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿರುವ ಅಶ್ವಿನ್ ಮತ್ತು ಜಡೇಜಾ ಮತ್ತು ಮೊಹಮ್ಮದ್ ಶಮಿಯ ಮ್ಯಾಜಿಕ್‌ನಿಂದಾಗಿ ನ್ಯೂಜಿಲೆಂಡ್ ಬ್ಯಾಟ್ಸ್‌ಮೆನ್‌ಗಳು ಮೂರು ಟೆಸ್ಟ್ ಪಂದ್ಯಗಳಲ್ಲಿ ಪರದಾಡಬೇಕಾಗಿತ್ತು.
ಮೂವರು ಬೌಲರ್‌ಗಳನ್ನು 4ನೇ ಮತ್ತು 5 ನೇ ಏಕದಿನ ಪಂದ್ಯಗಳಿಗೆ ಆಯ್ಕೆ ಮಾಡುತ್ತಾರೋ ಇಲ್ಲವೋ ಎನ್ನುವುದು ಇಲ್ಲಿಯವರೆಗೆ ಖಚಿತವಾಗಿಲ್ಲ ಎನ್ನಲಾಗಿದೆ.
ಕಳೆದ 2015 ಅಕ್ಟೋಬರ್‌ನಲ್ಲಿ ಕೊನೆಯ ಏಕದಿನ ಪಂದ್ಯವನ್ನಾಡಿದ್ದ ಸುರೇಶ್ ರೈನಾ ಅವರಿಗೆ ತಂಡದಲ್ಲಿ ಅಲಕಾಶ ನೀಡಲಾಗಿತ್ತು. ಆದರೆ, ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಕೈಬಿಡಲಾಗಿದೆ. ಗಾಯಗಳಿಂದಾಗಿ ಶಿಖರ್ ಧವನ್ ಮತ್ತು ಕೆ.ಎಲ್.ರಾಹುಲ್ ಈಗಾಗಲೇ ತಂಡದಿಂದ ಹೊರಬಿದ್ದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ