ಮುಂಬೈ: ಟೀಂ ಇಂಡಿಯಾ ಮುಂದಿನ ಕೋಚ್ ಆಗಿ ರಾಹುಲ್ ದ್ರಾವಿಡ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ಮಾತುಗಳಿಗೆ ಈಗ ಅಧಿಕೃತ ಮುದ್ರೆ ಸಿಕ್ಕಿದೆ. ದ್ರಾವಿಡ್ ಇಂದು ಕೋಚ್ ಹುದ್ದೆಗೆ ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ.
ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಕೊನೆಯ ದಿನ ರಾಹುಲ್ ದ್ರಾವಿಡ್ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ವಾಲ್ ದ್ರಾವಿಡ್ ಟೀಂ ಇಂಡಿಯಾ ಮುಂದಿನ ಮುಖ್ಯ ಕೋಚ್ ಆಗುವುದು ಬಹುತೇಕ ಖಚಿತವಾಗಿದೆ.
ಇನ್ನು, ಬೌಲಿಂಗ್ ಕೋಚ್ ಹುದ್ದೆಗೆ ದ್ರಾವಿಡ್ ವಿಶ್ವಾಸಾರ್ಹ ಸಹಾಯಕ, ಮಾಜಿ ವೇಗಿ ಪರಸ್ ಮಾಂಬ್ರೆ ಅರ್ಜಿ ಸಲ್ಲಿಸಿದ್ದಾರೆ. ಸ್ವತಃ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮನವಿ ಮೇರೆಗೆ ದ್ರಾವಿಡ್ ಕೋಚ್ ಹುದ್ದೆ ಅಲಂಕರಿಸಲು ಒಪ್ಪಿದ್ದರು ಎಂದು ವರದಿಯಾಗಿತ್ತು.