Publish Date: Fri, 26 Apr 2024 (10:54 IST)
Updated Date: Fri, 26 Apr 2024 (10:56 IST)
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದು ಮೊದಲ ಹಂತದ ಲೋಕಸಭೆ ಚುನಾವಣೆ ಇಂದು ನಡೆಯುತ್ತಿದೆ. ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಕೂಡಾ ಬೆಳಗ್ಗೆಯೇ ಮತ ಚಲಾಯಿಸಿದ್ದಾರೆ.
ರಾಹುಲ್ ದ್ರಾವಿಡ್ ಬೆಂಗಳೂರಿನಲ್ಲಿ ಇಂದು ತಮ್ಮ ಪತ್ನಿ, ಮಗನ ಜೊತೆಗೆ ಬಂದು ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ. ಈ ವೇಳೆ ಮಾಧ್ಯಮಗಳು ಅವರನ್ನು ಮುತ್ತಿಕೊಂಡಿದ್ದಾರೆ. ಹಾಗಿದ್ದರೂ ಎಂದಿನಂತೆ ಹಮ್ಮು ಬಿಮ್ಮು ಯಾವುದೂ ಇಲ್ಲದೇ ಸರಳತೆಯಿಂದಲೇ ನಡೆದುಕೊಂಡರು.
ಮತ ಚಲಾಯಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಾಹುಲ್ ದ್ರಾವಿಡ್ ಪ್ರತಿಯೊಬ್ಬರೂ ಮತ ಚಲಾವಣೆ ಮಾಡಲೇಬೇಕು. ಪ್ರಜಾಪ್ರಭುತ್ವದಲ್ಲಿ ನಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಅಡಲು ನಮಗಿರುವ ವಿಶೇಷ ಅಧಿಕಾರ ಇದಾಗಿದೆ ಎಂದು ಹೇಳಿದ್ದಾರೆ.
ರಾಹುಲ್ ದ್ರಾವಿಡ್ ಮಾತ್ರವಲ್ಲದೆ, ಇಂದು ಬೆಳಿಗ್ಗೆಯೇ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳೂ ಮತ ಚಲಾಯಿಸಿ, ಮತದಾನ ಮಾಡುವಂತೆ ಕರೆ ನೀಡಿದ್ದಾರೆ. ನಟ ಗೋಲ್ಡನ್ ಸ್ಟಾರ್ ಗಣೇಶ್, ಶ್ರೀಮುರಳಿ, ವಿನಯ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಅಮೂಲ್ಯ ಸೇರಿದಂತೆ ಅನೇಕರು ಮತ ಚಲಾಯಿಸಿ ಮಾದರಿಯಾಗಿದ್ದಾರೆ.