Daily Horoscope

ಬೆಳಗ್ಗೆಯೇ ಸರತಿ ಸಾಲಿನಲ್ಲಿ ಬಂದು ವೋಟ್ ಮಾಡಿದ ಕ್ರಿಕೆಟಿಗ ರಾಹುಲ್ ದ್ರಾವಿಡ್

Krishnaveni K
ಶುಕ್ರವಾರ, 26 ಏಪ್ರಿಲ್ 2024 (10:54 IST)
Photo Courtesy: Twitter
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದು ಮೊದಲ ಹಂತದ ಲೋಕಸಭೆ ಚುನಾವಣೆ ಇಂದು ನಡೆಯುತ್ತಿದೆ. ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಕೂಡಾ ಬೆಳಗ್ಗೆಯೇ ಮತ ಚಲಾಯಿಸಿದ್ದಾರೆ.

ರಾಹುಲ್ ದ್ರಾವಿಡ್ ಬೆಂಗಳೂರಿನಲ್ಲಿ ಇಂದು ತಮ್ಮ ಪತ್ನಿ, ಮಗನ ಜೊತೆಗೆ ಬಂದು ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ. ಈ ವೇಳೆ ಮಾಧ್ಯಮಗಳು ಅವರನ್ನು ಮುತ್ತಿಕೊಂಡಿದ್ದಾರೆ. ಹಾಗಿದ್ದರೂ ಎಂದಿನಂತೆ ಹಮ್ಮು ಬಿಮ್ಮು ಯಾವುದೂ ಇಲ್ಲದೇ ಸರಳತೆಯಿಂದಲೇ ನಡೆದುಕೊಂಡರು.

ಮತ ಚಲಾಯಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಾಹುಲ್ ದ್ರಾವಿಡ್ ‘ಪ್ರತಿಯೊಬ್ಬರೂ ಮತ ಚಲಾವಣೆ ಮಾಡಲೇಬೇಕು. ಪ್ರಜಾಪ್ರಭುತ್ವದಲ್ಲಿ ನಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಅಡಲು ನಮಗಿರುವ ವಿಶೇಷ ಅಧಿಕಾರ ಇದಾಗಿದೆ’ ಎಂದು ಹೇಳಿದ್ದಾರೆ.

ರಾಹುಲ್ ದ್ರಾವಿಡ್ ಮಾತ್ರವಲ್ಲದೆ, ಇಂದು ಬೆಳಿಗ್ಗೆಯೇ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳೂ ಮತ ಚಲಾಯಿಸಿ, ಮತದಾನ ಮಾಡುವಂತೆ ಕರೆ ನೀಡಿದ್ದಾರೆ. ನಟ ಗೋಲ್ಡನ್ ಸ್ಟಾರ್ ಗಣೇಶ್, ಶ್ರೀಮುರಳಿ, ವಿನಯ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಅಮೂಲ್ಯ ಸೇರಿದಂತೆ ಅನೇಕರು ಮತ ಚಲಾಯಿಸಿ ಮಾದರಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments