ಮುಂಬೈ: ಏಷ್ಯಾ ಕಪ್ ನಲ್ಲಿ ಭಾಗಿಯಾಗಬೇಕಿರುವ ಟೀಂ ಇಂಡಿಯಾ ಆಯ್ಕೆಗೆ ಮುನ್ನ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಜೊತೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ರಹಸ್ಯ ಮಾತುಕತೆ ನಡೆಸಿದ್ದಾರೆ.
ದ್ರಾವಿಡ್ ಜೊತೆ ಎರಡು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದ್ದಾರೆ. ಇತ್ತೀಚೆಗೆ ಕೋಚ್ ರಾಹುಲ್ ದ್ರಾವಿಡ್ ಕಾರ್ಯವೈಖರಿ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಏಕದಿನ ವಿಶ್ವಕಪ್ ಬಳಿಕ ದ್ರಾವಿಡ್ ಕೋಚ್ ಅವಧಿಯೂ ಮುಕ್ತಾಯವಾಗಲಿದೆ. ಈ ಹಿನ್ನಲೆಯಲ್ಲಿ ಈ ಮೀಟಿಂಗ್ ಮಹತ್ವ ಪಡೆದುಕೊಂಡಿದೆ.
ಇಬ್ಬರ ನಡುವಿನ ಮಾತುಕತೆಯ ವಿವರ ರಹಸ್ಯವಾಗಿಯೇ ಉಳಿದಿದೆ. ಆದರೆ ಮುಂಬರುವ ಏಷ್ಯಾ ಕಪ್ ದೃಷ್ಟಿಯಲ್ಲಿಟ್ಟುಕೊಂಡು ತಂಡದ ಆಯ್ಕೆ ಕುರಿತು ಚರ್ಚೆಯಾಗಿರಬಹುದು ಎನ್ನಲಾಗಿದೆ.