Daily Horoscope

ತಮ್ಮ ಗರಡಿಯಲ್ಲಿರುವ ಕೆಎಲ್ ರಾಹುಲ್ ಬಗ್ಗೆ ಬಾಯ್ಬಿಟ್ಟ ರಾಹುಲ್ ದ್ರಾವಿಡ್

Webdunia
ಶುಕ್ರವಾರ, 1 ಫೆಬ್ರವರಿ 2019 (09:45 IST)
ಮುಂಬೈ: ಟೀಂ ಇಂಡಿಯಾದಲ್ಲಿ ಕಳಪೆ ಫಾರ್ಮ್ ನಿಂದಾಗಿ ಸ್ಥಾನ ಕಳೆದುಕೊಂಡು ಇದೀಗ ಎ ತಂಡದ ಪರ ಆಡುತ್ತಿರುವ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಬಗ್ಗೆ ‘ವಾಲ್’ ರಾಹುಲ್ ದ್ರಾವಿಡ್ ಪ್ರತಿಕ್ರಿಯಿಸಿದ್ದಾರೆ.


ರಾಹುಲ್ ಕಳಪೆ ಫಾರ್ಮ್ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಹೀಗಾಗಿ ಮರಳಿ ಲಯಕ್ಕೆ ಬರಲು ಅವರನ್ನು ಎ ತಂಡದಲ್ಲಿ ಆಡಿಸಲಾಗುತ್ತಿದೆ. ಆದರೆ ಅಲ್ಲೂ ರಾಹುಲ್ ದೊಡ್ಡ ಪ್ರಭಾವ ಬೀರುವಲ್ಲಿ ಯಶಸ್ವಿಯಾಗಿಲ್ಲ. ಈ ಹಿನ್ನಲೆಯಲ್ಲಿ ಗುರು ರಾಹುಲ್ ದ್ರಾವಿಡ್ ರನ್ನು ಕೇಳಿದಾಗ ನನಗೆ ಕೆಎಲ್ ಫಾರ್ಮ್ ಬಗ್ಗೆ ದೊಡ್ಡ ಚಿಂತೆಯಿಲ್ಲ ಎಂದಿದ್ದಾರೆ.

‘ಮೂರೂ ಮಾದರಿಯ ಕ್ರಿಕೆಟ್ ನಲ್ಲಿ ಶತಕ ಗಳಿಸುವುದು ಸಾಮಾನ್ಯ ಮಾತಲ್ಲ. ಅದನ್ನು ಮಾಡಿರುವ ಕೆಎಲ್ ಈಗಾಗಲೇ ತನ್ನ ಸಾಮರ್ಥ್ಯ ನಿರೂಪಿಸಿದ್ದಾರೆ. ಹೀಗಾಗಿ ನನಗೆ ಆತನ ಬಗ್ಗೆ ದೊಡ್ಡ ಚಿಂತೆಯಿಲ್ಲ. ಕೆಎಲ್ ಈಗ ನಾಲ್ಕು ದಿನಗಳ ಪಂದ್ಯವಾಡುತ್ತಿದ್ದಾರೆ. ತಾನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೂರೂ ಮಾದರಿಯ ಕ್ರಿಕೆಟ್ ನಲ್ಲಿ ಯಶಸ್ವಿಯಾಗುವೆ ಎನ್ನುವುದನ್ನು ಅವರು ಸಾಬೀತುಪಡಿಸಿದ್ದಾರೆ’ ಎಂದು ದ್ರಾವಿಡ್ ಹೇಳಿಕೊಂಡಿದ್ದಾರೆ.

ಸದ್ಯಕ್ಕೆ ಎ ತಂಡದ ಪರ ಆಡುತ್ತಿರುವ ಕೆಎಲ್ ರಾಹುಲ್,  ಎ ತಂಡದ ಕೋಚ್ ರಾಹುಲ್ ದ್ರಾವಿಡ್ ಗರಡಿಯಲ್ಲಿ ಪಳಗುತ್ತಿದ್ದಾರೆ. ಇಲ್ಲಿ ಅವರು ಫಾರ್ಮ್ ಕಂಡುಕೊಂಡರೆ ಮಾತ್ರ ಮತ್ತೆ ಟೀಂ ಇಂಡಿಯಾದಲ್ಲಿ ಅವಕಾಶ ದೊರಕಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments