ಮುಂಬೈ: ಆಸ್ಟ್ರೇಲಿಯಾ ಸರಣಿಗೆ ಮೊದಲು ನ್ಯೂಜಿಲೆಂಡ್ ನಲ್ಲಿ ಭಾರತ ಎ ತಂಡ ಟೆಸ್ಟ್ ಸರಣಿ ಆಡಲಿದೆ. ಈ ಪಂದ್ಯಕ್ಕೆ ರೋಹಿತ್ ಶರ್ಮಾ ಸೇರಿದಂತೆ ಕೆಲವು ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಆಟಗಾರರು ಹಾಜರಾಗುತ್ತಿರುವುದರ ಬಗ್ಗೆ ಕೋಚ್ ರಾಹುಲ್ ದ್ರಾವಿಡ್ ಪ್ರತಿಕ್ರಿಯಿಸಿದ್ದಾರೆ.
ಟೆಸ್ಟ್ ಸರಣಿಗೆ ಸಜ್ಜಾಗಲು ಟಿ20 ಸರಣಿಯನ್ನೂ ಕೈ ಬಿಡಲು ರೋಹಿತ್ ಸಿದ್ಧರಾಗಿದ್ದಾರೆ. ಇದರ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ದ್ರಾವಿಡ್ ಹಿರಿಯ ಆಟಗಾರರು ಆಸ್ಟ್ರೇಲಿಯಾ ಸರಣಿಗೆ ಸಜ್ಜಾಗಲು ಎ ತಂಡದಲ್ಲಿ ಆಡುವುದು ನಿಜಕ್ಕೂ ಉತ್ತಮ ಬೆಳವಣಿಗೆ ಎಂದಿದ್ದಾರೆ.
ಇದು ಹಿರಿಯ ಆಟಗಾರರಿಗೂ, ಎ ತಂಡದ ಕಿರಿಯರಿಗೂ ಲಾಭ ಎಂದಿದ್ದಾರೆ ದ್ರಾವಿಡ್. ಎ ತಂಡದ ಆಟಗಾರರಿಗೆ ಆಸ್ಟ್ರೇಲಿಯಾದಲ್ಲಿ ಆಡಲು ಅವಕಾಶ ಸಿಕ್ಕಿದ್ದರೆ ಇನ್ನೂ ಒಳ್ಳೆಯದಿತ್ತು. ಇದರಿಂದ ಟೆಸ್ಟ್ ಸರಣಿಗೆ ಚೆನ್ನಾಗಿ ತಯಾರಾಗಬಹುದಿತ್ತು. ಆದರೆ ನ್ಯೂಜಿಲೆಂಡ್ ನಲ್ಲಿ ಅವಕಾಶ ಸಿಕ್ಕಿದೆ. ಇದರಿಂದ ಹಿರಿಯರಿಗೂ ಅಭ್ಯಾಸ ಸಿಕ್ಕಂತಾಗುತ್ತದೆ. ಹಾಗೆಯೇ ಕಿರಿಯ ಆಟಗಾರರಿಗೆ ಹಿರಿಯ ಆಟಗಾರರೊಂದಿಗೆ ಡ್ರೆಸ್ಸಿಂಗ್ ರೂಂ ಹಂಚಿಕೊಳ್ಳಲು ಅವಕಾಶ ಸಿಗುವುದರಿಂದ ಅನುಭವ ಹಂಚಿಕೊಳ್ಳಲು ಅವಕಾಶ ಸಿಕ್ಕಂತಾಗುತ್ತದೆ. ಇದು ಒಂದು ಉತ್ತಮ ಬೆಳವಣಿಗೆ ಎಂದು ದ್ರಾವಿಡ್ ತಮ್ಮ ತಂಡಕ್ಕೆ ಬರುತ್ತಿರುವ ಹಿರಿಯರನ್ನು ಸ್ವಾಗತಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.