ಭಾರತ ಎ ತಂಡಕ್ಕೆ ಬರುತ್ತಿರುವ ಟೀಂ ಇಂಡಿಯಾ ಆಟಗಾರರ ಬಗ್ಗೆ ರಾಹುಲ್ ದ್ರಾವಿಡ್ ಹೇಳಿದ್ದೇನು ಗೊತ್ತಾ?

Webdunia
ಬುಧವಾರ, 14 ನವೆಂಬರ್ 2018 (09:25 IST)
ಮುಂಬೈ: ಆಸ್ಟ್ರೇಲಿಯಾ ಸರಣಿಗೆ ಮೊದಲು ನ್ಯೂಜಿಲೆಂಡ್ ನಲ್ಲಿ ಭಾರತ ಎ ತಂಡ ಟೆಸ್ಟ್ ಸರಣಿ ಆಡಲಿದೆ. ಈ ಪಂದ್ಯಕ್ಕೆ ರೋಹಿತ್ ಶರ್ಮಾ ಸೇರಿದಂತೆ ಕೆಲವು ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಆಟಗಾರರು ಹಾಜರಾಗುತ್ತಿರುವುದರ ಬಗ್ಗೆ ಕೋಚ್ ರಾಹುಲ್ ದ್ರಾವಿಡ್ ಪ್ರತಿಕ್ರಿಯಿಸಿದ್ದಾರೆ.

ಟೆಸ್ಟ್ ಸರಣಿಗೆ ಸಜ್ಜಾಗಲು ಟಿ20 ಸರಣಿಯನ್ನೂ ಕೈ ಬಿಡಲು ರೋಹಿತ್ ಸಿದ್ಧರಾಗಿದ್ದಾರೆ. ಇದರ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ದ್ರಾವಿಡ್ ಹಿರಿಯ ಆಟಗಾರರು ಆಸ್ಟ್ರೇಲಿಯಾ ಸರಣಿಗೆ ಸಜ್ಜಾಗಲು ಎ ತಂಡದಲ್ಲಿ ಆಡುವುದು ನಿಜಕ್ಕೂ ಉತ್ತಮ ಬೆಳವಣಿಗೆ ಎಂದಿದ್ದಾರೆ.

ಇದು ಹಿರಿಯ ಆಟಗಾರರಿಗೂ, ಎ ತಂಡದ ಕಿರಿಯರಿಗೂ ಲಾಭ ಎಂದಿದ್ದಾರೆ ದ್ರಾವಿಡ್.  ಎ ತಂಡದ ಆಟಗಾರರಿಗೆ ಆಸ್ಟ್ರೇಲಿಯಾದಲ್ಲಿ ಆಡಲು ಅವಕಾಶ ಸಿಕ್ಕಿದ್ದರೆ ಇನ್ನೂ ಒಳ್ಳೆಯದಿತ್ತು. ಇದರಿಂದ ಟೆಸ್ಟ್ ಸರಣಿಗೆ ಚೆನ್ನಾಗಿ ತಯಾರಾಗಬಹುದಿತ್ತು. ಆದರೆ ನ್ಯೂಜಿಲೆಂಡ್ ನಲ್ಲಿ ಅವಕಾಶ ಸಿಕ್ಕಿದೆ. ಇದರಿಂದ ಹಿರಿಯರಿಗೂ ಅಭ್ಯಾಸ ಸಿಕ್ಕಂತಾಗುತ್ತದೆ. ಹಾಗೆಯೇ ಕಿರಿಯ ಆಟಗಾರರಿಗೆ ಹಿರಿಯ ಆಟಗಾರರೊಂದಿಗೆ ಡ್ರೆಸ್ಸಿಂಗ್ ರೂಂ ಹಂಚಿಕೊಳ್ಳಲು ಅವಕಾಶ ಸಿಗುವುದರಿಂದ ಅನುಭವ ಹಂಚಿಕೊಳ್ಳಲು ಅವಕಾಶ ಸಿಕ್ಕಂತಾಗುತ್ತದೆ. ಇದು ಒಂದು ಉತ್ತಮ ಬೆಳವಣಿಗೆ ಎಂದು ದ್ರಾವಿಡ್ ತಮ್ಮ ತಂಡಕ್ಕೆ ಬರುತ್ತಿರುವ ಹಿರಿಯರನ್ನು ಸ್ವಾಗತಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾಗೆ ಮರಳಿದ ಕಿಂಗ್‌ ಕೊಹ್ಲಿ, ಸಹ ಆಟಗಾರರ ಜತೆಗಿನ ವಿರಾಟ್ ಕ್ಷಣ ನೋಡುವುದೇ ಖುಷಿ

ಕೊಹ್ಲಿಯಿಂದ ಬ್ಯಾಟಿಂಗ್ ಟಿಪ್ಸ್, ರೋಹಿತ್ ರಿಂದ ಕ್ಯಾಪ್ಟನ್ಸಿ ಟಿಪ್ಸ್: ಶುಭಮನ್ ಗಿಲ್ ಬಲು ಜಾಣ

ಫಿಟ್ ಇದ್ರೆ ನಂಗೆ ಹೇಳ್ಬೇಕಿತ್ತು, ಮೊಹಮ್ಮದ್ ಶಮಿಗೆ ಅಜಿತ್ ಅಗರ್ಕರ್ ತಿರುಗೇಟು

ಯಾವ ದಿನ ನಿವೃತ್ತಿಯಾಗುತ್ತೇನೆಂದು ಅಂದೇ ಹೇಳಿದ್ದರು ವಿರಾಟ್ ಕೊಹ್ಲಿ

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ಮುಂದಿನ ಸುದ್ದಿ
Show comments