Publish Date: Mon, 29 Apr 2019 (08:28 IST)
Updated Date: Mon, 29 Apr 2019 (08:31 IST)
ಮುಂಬೈ: ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ತಮ್ಮ ಕೋಚ್ ಹುದ್ದೆ ಉಳಿಸಿಕೊಳ್ಳಬೇಕೆಂದಿದ್ದರೆ ಮತ್ತು ಎ ತಂಡದ ಕೋಚ್ ರಾಹುಲ್ ದ್ರಾವಿಡ್ ಎನ್ ಸಿಎ ಹೆಡ್ ಕೋಚ್ ಆಗಬೇಕೆಂದಿದ್ದರೆ ಮತ್ತೆ ಅರ್ಜಿ ಸಲ್ಲಿಸಬೇಕು ಎಂದು ಬಿಸಿಸಿಐ ಹೇಳಿದೆ.
ವಿಶ್ವಕಪ್ ಮುಗಿದ ಬಳಿಕ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಅವಧಿ ಮುಕ್ತಾಯಗೊಳ್ಳಲಿದೆ. ಹೀಗಾಗಿ ಅವರು ಮತ್ತೆ ತಂಡದಲ್ಲಿ ಮುಂದುವರಿಯಬೇಕಾದರೆ ಹೊಸದಾಗಿ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಬೇಕು.
ಇನ್ನು, ಬೆಂಗಳೂರಿನಲ್ಲಿರುವ ಯುವ ಕ್ರಿಕೆಟಿಗರ ತರಬೇತಿ ತಾಣವಾಗಿರುವ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯ ಮುಖ್ಯ ಕೋಚ್ ಹುದ್ದೆ ಖಾಲಿಯಿದ್ದು, ಇದಕ್ಕೆ ದ್ರಾವಿಡ್ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ. ಹಾಗಿದ್ದರೂ ನಿಯಮದ ಪ್ರಕಾರ ದ್ರಾವಿಡ್ ಕೂಡಾ ಹೊಸದಾಗಿ ಅರ್ಜಿ ಹಾಕಿ ಸಂದರ್ಶನ ನೀಡಿಯೇ ಕೋಚ್ ಹುದ್ದೆ ಗಿಟ್ಟಿಸಿಕೊಳ್ಳಬೇಕಿದೆ. ಈ ಬಗ್ಗೆ ಬಿಸಿಸಿಐ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ