Publish Date: Fri, 08 Dec 2017 (10:49 IST)
Updated Date: Fri, 08 Dec 2017 (10:55 IST)
ನಾಗ್ಪುರ: ಮುಂಬೈ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ದ್ವಿತೀಯ ದಿನವಾದ ಇಂದು ಪ್ರಥಮ ಇನಿಂಗ್ಸ್ ನಲ್ಲಿ ಮುನ್ನಡೆ ಸಾಧಿಸಿದೆ.
ಇತ್ತೀಚೆಗಿನ ವರದಿ ಬಂದಾಗ ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 3 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿದೆ. ಮುಂಬೈ ಪ್ರಥಮ ಇನಿಂಗ್ಸ್ ನಲ್ಲಿ 173 ರನ್ ಗಳಿಗೆ ಆಲೌಟ್ ಆಗಿತ್ತು.
ಕರ್ನಾಟಕದ ಪರ ಅದ್ಭುತ ಫಾರ್ಮ್ ನಲ್ಲಿರುವ ಮಯಾಂಕ್ ಅಗರ್ವಾಲ್ ಮತ್ತೊಂದು ಅರ್ಧಶತಕ (78) ರನ್ ಗಳಿಸಿ ಔಟಾದರು. ಕರುಣ್ ನಾಯರ್ ಕೇವಲ 16 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ನಿನ್ನೆ ನಾಟೌಟ್ ಆಗಿ ಉಳಿದಿದ್ದ ಎಂಕೆ ಅಬ್ಬಾಸ್ ಇಂದೂ ಬ್ಯಾಟಿಂಗ್ ಮುಂದುವರಿಸಿದ್ದು 32 ರನ್ ಗಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ