Publish Date: Mon, 17 Dec 2018 (17:04 IST)
Updated Date: Mon, 17 Dec 2018 (17:05 IST)
ಸೂರತ್: ಇಲ್ಲಿ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ಗುಜರಾತ್ ವಿರುದ್ಧದ ಪಂದ್ಯವನ್ನು ಡ್ರಾ ಮಾಡಿಕೊಂಡಿದೆ.
ದ್ವಿತೀಯ ಇನಿಂಗ್ಸ್ ನಲ್ಲಿ ಗೆಲುವಿಗೆ 173 ರನ್ ಗಳ ಗುರಿ ಬೆನ್ನತ್ತಿದ್ದ ಕರ್ನಾಟಕ ದ್ವಿತೀಯ ಇನಿಂಗ್ಸ್ ನಲ್ಲಿ ಉತ್ತಮವಾಗಿ ಬ್ಯಾಟ್ ಮಾಡುತ್ತಿತ್ತು. ಆದರೆ ಅಂತಿಮ ದಿನವಾದ ಇಂದು ದಿನದಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಲಷ್ಟೇ ಶಕ್ತವಾಯಿತು.
ಇದರೊಂದಿಗೆ ಪಂದ್ಯ ಡ್ರಾ ಆಯಿತು. ಕರ್ನಾಟಕ ಪರ ದ್ವಿತೀಯ ಇನಿಂಗ್ಸ್ ನಲ್ಲಿ ಮಯಾಂಕ್ ಅಗರ್ವಾಲ್ 53 ರನ್ ಸಿಡಿಸಿದ್ದರು. ಬೌಲಿಂಗ್ ಮತ್ತು ಬ್ಯಾಟಿಂಗ್ ನಲ್ಲಿ ಉತ್ತಮ ನಿರ್ವಹಣೆ ತೋರಿದ ಶ್ರೇಯಸ್ ಗೋಪಾಲ್ ಪಂದ್ಯ ಶ್ರೇಷ್ಠರಾದರು. ಕರ್ನಾಟಕಕ್ಕೆ ಮುಂದಿನ ಪಂದ್ಯ ರೈಲ್ವೇಸ್ ವಿರುದ್ಧ ಡಿಸೆಂಬರ್ 22 ರಿಂದ ನಡೆಯಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ