Publish Date: Wed, 21 Nov 2018 (17:26 IST)
Updated Date: Wed, 21 Nov 2018 (17:28 IST)
ಬೆಳಗಾವಿ: ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಪ್ರಬಲ ಮುಂಬೈಯನ್ನು ಕರ್ನಾಟಕ ಹುಡುಗರು ಕಟ್ಟಿ ಹಾಕಲು ಯಶಸ್ವಿಯಾಗಿದ್ದಾರೆ.
ರಣಜಿ ಟ್ರೋಫಿ ಪಂದ್ಯಾವಳಿಯ ಎರಡನೇ ಪಂದ್ಯವಾಡುತ್ತಿರುವ ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ ಕೆ ಸಿದ್ಧಾರ್ಥ್ ಶತಕದ (164) ನೆರವಿನಿಂದ ಭರ್ತಿ 400 ರನ್ ಗಳಿಸಿತ್ತು. ಮೊದಲ ಇನಿಂಗ್ಸ್ ನಲ್ಲಿ ಮುಂಬೈ ಪರ ಶಿವಂ ದುಬೆ 7 ವಿಕೆಟ್ ಕಿತ್ತರು.
ದ್ವಿತೀಯ ಇನಿಂಗ್ಸ್ ಆರಂಭಿಸಿದ ಮುಂಬೈ ದ್ವಿತೀಯ ದಿನದಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 99 ರನ್ ಗಳಿಸಿದ್ದಾರೆ. ಕರ್ನಾಟಕ ಪರ ಅಭಿಮನ್ಯು ಮಿಥುನ್ ಹಾಗೂ ರೋಹಿತ್ ಮೋರೆ ತಲಾ 1 ವಿಕೆಟ್ ಕಬಳಿಸಿದ್ದಾರೆ. ಮುಂಬೈ ಪರ ಜಯ ಗೋಕುಲ್ ಬಿಸ್ತಾ 69 ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಕರ್ನಾಟಕದ ಮೊದಲ ಇನಿಂಗ್ಸ್ ಮೊತ್ತ ದಾಟಲು ಮುಂಬೈಗೆ ಇನ್ನೂ 301 ರನ್ ಗಳ ಅಗತ್ಯವಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.