Webdunia - Bharat's app for daily news and videos

Install App

ಕಪಿಲ್ ದೇವ್ ಸಾಧನೆ ಸಮಗೊಳಿಸಿ ಪ್ರತಿಷ್ಟಿತ ಕ್ಲಬ್‌ಗೆ ಸೇರಿದ ಅಶ್ವಿನ್

Webdunia
ಗುರುವಾರ, 11 ಆಗಸ್ಟ್ 2016 (11:32 IST)
ರವಿಚಂದ್ರನ್ ಅಶ್ವಿನ್ ಪ್ರಸಕ್ತ ವೆಸ್ಟ್ ಇಂಡೀಸ್ ವಿರುದ್ಧ ಸರಣಿಯಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿ ಅತೀ ಹೆಚ್ಚು ರನ್ ಸ್ಕೋರ್ ಮಾಡಿದ ಶ್ರೇಯಕ್ಕೆ ಪಾತ್ರರಾಗಿದ್ದಾರೆ. ಆಂಟಿಗಾದ ಮೊದಲ ಟೆಸ್ಟ್‌ನಲ್ಲಿ ಶತಕ ಸ್ಕೋರ್ ಮಾಡಿದ್ದ ಅಶ್ವಿನ್ ಸರಣಿಯಲ್ಲಿ ಎರಡನೇ ಶತಕವನ್ನು ಸಿಡಿಸಿದರು. ಇದರ ಜತೆಗೆ 2 ಬಾರಿ ಐದು ವಿಕೆಟ್ ಕಬಳಿಸಿದ ಅವರು ಪ್ರತಿಷ್ಠಿತ ಪಟ್ಟಿಯಲ್ಲಿ ಸೇರಿದ್ದಾರೆ.
 
 ಅಶ್ವಿನ್ ಟೆಸ್ಟ್ ಸರಣಿಯಲ್ಲಿ ಐದು ವಿಕೆಟ್ ಕಬಳಿಕೆ ಮತ್ತು ಎರಡು ಶತಕಗಳನ್ನು ಸಿಡಿಸಿದ ಕಪಿಲ್ ಮತ್ತು ಭುವನೇಶ್ವರ್ ಕುಮಾರ್ ಸಾಲಿಗೆ ಮೂರನೇ ಆಟಗಾರರಾಗಿ ಸೇರಿದ್ದಾರೆ. ಕಪಿಲ್ ದೇವ್ ಈ ಸಾಧನೆಯನ್ನು ಎರಡು  ಭಾರಿ ಮಾಡಿದ್ದರೆ ಭುವನೇಶ್ವರ್ ಕುಮಾರ್ ಇಂಗ್ಲೆಂಡ್ ವಿರುದ್ದ 2014ರ ಐದು ಟೆಸ್ಟ್ ಸರಣಿಯಲ್ಲಿ ಈ ಸಾಧನೆ ಮಾಡಿದ್ದಾರೆ.
 
ಬಲಗೈ ಆಟಗಾರ ವೆಸ್ಟ್ ಇಂಡೀಸ್ ವಿರುದ್ಧ 8ನೇ ಟೆಸ್ಟ್‌ನಲ್ಲಿ ನಾಲ್ಕನೇ ಶತಕವನ್ನು ಸ್ಕೋರ್ ಮಾಡಿದರು. ವೆಸ್ಟ್ ಇಂಡೀಸ್ ವಿರುದ್ಧ ಶತಕಗಳನ್ನು ಸಿಡಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳ ಸರ್ವಕಾಲಿಕ ಪಟ್ಟಿಯಲ್ಲಿ ಅವರು ನಾಲ್ಕನೆಯವರಾಗಿದ್ದು, ಸುನಿಲ್ ಗವಾಸ್ಕರ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು 13 ಶತಕಗಳನ್ನು ಗಳಿಸಿದ್ದಾರೆ. ಅವರ ಬೆನ್ನಲ್ಲೇ ದಿಲೀಪ್ ವೆಂಗ್‌ಸರ್ಕಾರ್ 6 ಮತ್ತು ರಾಹುಲ್ ದ್ರಾವಿಡ್ 5 ಶತಕ ಸಿಡಿಸಿದ್ದಾರೆ.
 
ಭಾರತದ 6 ಮತ್ತು 7ನೇ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಮೊದಲ ಬಾರಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಸ್ಕೋರ್ ಮಾಡಿದ್ದಾರೆ. 6ನೇ ವಿಕೆಟ್‌ಗೆ ಅವರ 213 ರನ್ ಜತೆಯಾಟವು ವೆಸ್ಟ್ ಇಂಡೀಸ್‌ ವಿರುದ್ಧ ಟೆಸ್ಟ್‌ನಲ್ಲಿ ಅತ್ಯುತ್ತಮ ಸ್ಕೋರಾಗಿದ್ದು 1983ರ ಚೆನ್ನೈ ಟೆಸ್ಟ್‌ನಲ್ಲಿ ಗವಾಸ್ಕರ್ ಮತ್ತು ರವಿ ಶಾಸ್ತ್ರಿ ಸ್ಕೋರ್ ಮಾಡಿದ 170 ರನ್ ಮೀರಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಮಾರ್ಚ್ 17 ಕ್ಕೆ ಚಿನ್ನಸ್ವಾಮಿ ಮೈದಾನದಲ್ಲಿ ಅಭಿಮಾನಿಗಳಿಂದ ಕೊಹ್ಲಿಗೆ ಸರ್ಪ್ರೈಸ್

IPL 2025: ಐಪಿಎಲ್ 2025 ರ ಹೊಸ ವೇಳಾಪಟ್ಟಿ ವಿವರ

Virat Kohli retirement: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ವಿದಾಯ ಪಂದ್ಯವನ್ನೂ ನೀಡದೇ ಗೇಟ್ ಪಾಸ್

Virat Kohli: ವಿರಾಟ್ ಕೊಹ್ಲಿ ಸ್ಥಾನಕ್ಕೆ ಕ್ಯೂನಲ್ಲಿ ನಿಂತಿರುವ ಟೀಂ ಇಂಡಿಯಾ ಕ್ರಿಕೆಟಿಗರು

Virat Kohli: ಪತಿ ನಿವೃತ್ತಿ ಬಗ್ಗೆ ಹೃದಯಸ್ಪರ್ಶಿ ಪೋಸ್ಟ್ ಹಂಚಿದ ಅನುಷ್ಕಾ ಶರ್ಮಾ

ಮುಂದಿನ ಸುದ್ದಿ
Show comments