Select Your Language

Notifications

webdunia
webdunia
webdunia
webdunia

ದ.ಆಫ್ರಿಕಾ ವಿರುದ್ಧ ರವಿಚಂದ್ರನ್ ಅಶ್ವಿನ್ ಹೊಸ ದಾಖಲೆ

ದ.ಆಫ್ರಿಕಾ ವಿರುದ್ಧ ರವಿಚಂದ್ರನ್ ಅಶ್ವಿನ್ ಹೊಸ ದಾಖಲೆ
ಪುಣೆ , ಭಾನುವಾರ, 13 ಅಕ್ಟೋಬರ್ 2019 (08:47 IST)
ಪುಣೆ: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ತೃತೀಯ ದಿನ ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೊಸ ದಾಖಲೆ ಮಾಡಿದ್ದಾರೆ.


ದ.ಆಫ್ರಿಕಾ ಮೊದಲ ಇನಿಂಗ್ಸ್ ನಲ್ಲಿ ಅಶ್ವಿನ್ 4 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ದ.ಆಫ್ರಿಕಾ ವಿರುದ್ಧ ಟೆಸ್ಟ್ ಕ್ರಿಕೆಟ್ ನಲ್ಲಿ ತಮ್ಮ ವಿಕೆಟ್ ಗಳಿಕೆಯನ್ನು 50 ಕ್ಕೇರಿಸಿದ್ದಾರೆ. ಈ ಮೂಲಕ ಆಫ್ರಿಕಾ ವಿರುದ್ಧ 50 ಪ್ಲಸ್ ವಿಕೆಟ್ ಗಳಿಸಿದ ನಾಲ್ಕನೇ ಭಾರತೀಯ ಬೌಲರ್ ಎನಿಸಿದ್ದಾರೆ.

ಇದಕ್ಕೂ ಮೊದಲು ಅನಿಲ್ ಕುಂಬ್ಳೆ, ಹರ್ಭಜನ್ ಸಿಂಗ್ ಮತ್ತು ಜಾವಗಲ್ ಶ್ರೀನಾಥ್ ಈ ದಾಖಲೆ ಮಾಡಿದ್ದರು. 84 ವಿಕೆಟ್ ಗಳೊಂದಿಗೆ ಅನಿಲ್ ಕುಂಬ್ಳೆ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೊಂದು ಗೆಲುವಿನ ಸನಿಹ ಟೀಂ ಇಂಡಿಯಾ