ಮುಂಬೈ: ಟೀಂ ಇಂಡಿಯಾ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಗೆ ಕೊರೋನಾ ಪಾಸಿಟಿವ್ ಆಗಿದ್ದು, ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದೊಂದಿಗೆ ಲಂಡನ್ ಗೆ ತೆರಳಲಿಲ್ಲ.
ಟೀಂ ಇಂಡಿಯಾ ಕ್ರಿಕೆಟಿಗರು ಈಗಾಗಲೇ ಲಂಡನ್ ಗೆ ಬಂದು ಅಭ್ಯಾಸ ಆರಂಭಿಸಿದ್ದು, ಅಶ್ವಿನ್ ಸದ್ಯಕ್ಕೆ ತವರಿನಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ. ಲೀಸೆಸ್ಟರ್ ಶೈರ್ ವಿರುದ್ಧದ ಅಭ್ಯಾಸ ಪಂದ್ಯವನ್ನಂತೂ ಅವರು ಮಿಸ್ ಮಾಡಿಕೊಳ್ಳಲಿದ್ದಾರೆ.
ಆದರೆ ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯಕ್ಕೆ ಲಭ‍್ಯರಿರುತ್ತಾರಾ ಎನ್ನುವುದು ಇನ್ನೂ ಖಚಿತವಾಗಿಲ್ಲ. ಸದ್ಯಕ್ಕೆ ಅವರು ನಿಯಮಗಳ ಪ್ರಕಾರ ಕ್ವಾರಂಟೈನ್ ನಲ್ಲಿರಬೇಕಾಗುತ್ತದೆ.