ಲಂಡನ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಗಂಭೀರವಾಗಿ ಪರಿಗಣಿಸಿರುವ ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಇದೀಗ ಕೌಂಟಿ ಕ್ರಿಕೆಟ್ ಮೊರೆ ಹೋಗಿದ್ದಾರೆ.
ಆಗಸ್ಟ್ 4 ರಿಂದ ಟೆಸ್ಟ್ ಸರಣಿ ಆರಂಭವಾಗಲಿದ್ದು, ಅದಕ್ಕೂ ಮುನ್ನ ಸಾಕಷ್ಟು ಸಮಯಾವಕಾಶವಿದೆ. ಇದನ್ನು ಸರಿಯಾಗಿಯೇ ಸದುಪಯೋಗಪಡಿಸಿಕೊಳ‍್ಳಲು ಅಶ್ವಿನ್ ನಿರ್ಧರಿಸಿದ್ದಾರೆ.
ಜುಲೈ 11 ರಿಂದ ಸರ್ರೆ ತಂಡದ ಪರ ಕೌಂಟಿ ಕ್ರಿಕೆಟ್ ಆಡಲು ಅಶ್ವಿನ್ ನಿರ್ಧರಿಸಿದ್ದಾರೆ. ಇದರಿಂದ ಇಂಗ್ಲೆಂಡ್ ಪಿಚ್ ಗೆ ಹೊಂದಿಕೊಳ್ಳಲು ಅವರಿಗೆ ಅವಕಾಶ ಸಿಕ್ಕಂತಾಗುತ್ತದೆ. ಹಿಂದೆಯೂ ಅಶ್ವಿನ್ ಹಲವು ಬಾರಿ ಕೌಂಟಿ ಕ್ರಿಕೆಟ್ ಆಡಿದ್ದರು.