Publish Date: Fri, 19 Oct 2018 (08:43 IST)
Updated Date: Fri, 19 Oct 2018 (08:45 IST)
ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ಭಾನುವಾರದಿಂದ ಆರಂಭವಾಗಲಿರುವ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾಗೆ ಅನಿಲ್ ಕುಂಬ್ಳೆ, ಕಪಿಲ್ ದೇವ್ ರ ದಾಖಲೆ ಮುರಿಯುವ ಅವಕಾಶ ಎದುರಾಗಿದೆ.
ವಿಂಡೀಸ್ ವಿರುದ್ಧ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆ ಕಪಿಲ್ ದೇವ್ ಹೆಸರಿನಲ್ಲಿದೆ. ಅವರು 42 ಪಂದ್ಯಗಳಿಂದ 43 ವಿಕೆಟ್ ಪಡೆದಿದ್ದರು. ಅನಿಲ್ ಕುಂಬ್ಳೆ 41 ವಿಕೆಟ್ ಪಡೆದು ದ್ವಿತೀಯ ಸ್ಥಾನದಲ್ಲಿದ್ದರೆ 33 ವಿಕೆಟ್ ಪಡೆದ ಹರ್ಭಜನ್ ಸಿಂಗ್ 33 ವಿಕೆಟ್ ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಪ್ರಸಕ್ತ ರವೀಂದ್ರ ಜಡೇಜಾ ವಿಂಡೀಸ್ ವಿರುದ್ಧ 29 ವಿಕೆಟ್ ಪಡೆದಿದ್ದು, ಇನ್ನು 15 ವಿಕೆಟ್ ಪಡೆದರೆ ಕಪಿಲ್ ದೇವ್ ದಾಖಲೆಯನ್ನು ಮುರಿಯಲಿದ್ದಾರೆ. ಸದ್ಯ ಉತ್ತಮ ಫಾರ್ಮ್ ನಲ್ಲಿರುವ ಜಡೇಜಾಗೆ ಐದು ಪಂದ್ಯಗಳಲ್ಲಿ ಆ ದಾಖಲೆ ಮುರಿಯುವ ಅವಕಾಶವಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.