RCB vs PBKS Match live: ಪಂಜಾಬ್ ವಿರುದ್ಧ ಸೇಡು ತೀರಿಸಕೊಳ್ಳುತ್ತಾ ರಜತ್ ಪಟಿದಾರ್ ಪಡೆ

Sampriya
ಭಾನುವಾರ, 20 ಏಪ್ರಿಲ್ 2025 (16:43 IST)
Photo Credit X
ಬೆಂಗಳೂರು: ಐಪಿಎಲ್ 2025 ರಲ್ಲಿ ಆರ್‌ಸಿಬಿ ಮತ್ತು ಪಿಬಿಕೆಎಸ್ ತಂಡಗಳು ಎರಡು ದಿನಗಳ ಅಂತರದಲ್ಲಿ ಮತ್ತೇ ಇಂದು ಮುಖಾಮುಖಿಯಾಗುತ್ತಿದೆ. ಮುಲ್ಲನ್‌ಪುರದಲ್ಲಿ ನಡೆಯುತ್ತಿರುವ ಇಂದಿನ ಪಂದ್ಯಾಟದಲ್ಲಿ ಆರ್‌ಸಿಬಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಹಿಂದಿನ ಪಂದ್ಯಾಟದಲ್ಲಿ ಆರ್‌ಸಿಬಿ, ಪಂಜಾಬ್ ವಿರುದ್ಧ ಹೀನಾಯ ಸೋಲು ಅನುಭವಿಸಿತು. ಅದಲ್ಲದೆ ಆರ್‌ಸಿಬಿ ಬ್ಯಾಟಿಂಗ್‌ ಬಗ್ಗೆ ಭಾರೀ ಟೀಕೆಗಳು ವ್ಯಕ್ತವಾಗಿತ್ತು. ಇದೀಗ ಈ ಎಲ್ಲ ಟೀಕೆಗಳಿಗೆ ಇಂದಿನ ಪಂದ್ಯಾಟದ ಮೂಲಕ ಉತ್ತರ ಕೊಡಲು ಆರ್‌ಸಿಬಿ ಸಜ್ಜಾಗಿದೆ.

ತವರು ಮೈದಾನದಲ್ಲೇ ಸೋಲನುಭವಿಸಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಈಗಾಗಲೇ ಆರ್‌ಸಿಬಿಯು ಆಡಿರುವ 7ರಲ್ಲಿ 4 ಪಂದ್ಯ ಗೆದ್ದಿದ್ದು, ಇನ್ನೂ ಮೂರು ಪಂದ್ಯಗಳನ್ನು ತವರಿನಲ್ಲೇ ಸೋತಿದೆ ಸೋತಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಝಲ್‌ವುಡ್, ಯಶ್ ದಯಾಳ್, ಸುಯಶ್ ಶರ್ಮಾ, ಸ್ವಪ್ನಿಲ್ ಸಿಂಗ್, ರಾಸಿಖ್ ದರ್ ಸಲಾಮ್, ಜೇಕಬ್ ಬೆಥೆಲ್, ರೊಮಾರಿಯೊ ಶೆಫರ್ಡ್, ಲುಂಗಿ ಎನ್‌ಗಿಡಿ, ನುವಾನ್ ತುಷಾರ, ಮೋಹಿತ್ ರಾಠಿ, ಸ್ವಸ್ತಿಕ್ ಚಿಕಾರ, ಅಭಿನಂದನ್ ಸಿಂಗ್.



ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

India vs Australia: ಶಹಬ್ಬಾಸ್‌, ಜೆಮಿಮಾ ರಾಡ್ರಿಗಸ್ ಅಬ್ಬರಕ್ಕೆ ಮಕಾಡೆ ಮಲಗಿದ ಆಸ್ಟ್ರೇಲಿಯಾ

INDW vs AUSW: ಗೆಲ್ಲಲಿ ಸೋಲಲಿ ಅಭಿಮಾನಿಗಳ ಕಣ್ಣಲ್ಲಿ ಹೀರೋ ಆದ ಜೆಮಿಮಾ ರೊಡ್ರಿಗಸ್

ರೋಹಿತ್ ಶರ್ಮಾ ಬಗ್ಗೆ ಬಂದ ರೂಮರ್ ಗಳಿಗೆ ಮುಂಬೈ ಇಂಡಿಯನ್ಸ್ ಮಹತ್ವದ ಹೇಳಿಕೆ

INDW vs AUSW: ಪಂದ್ಯಾಟದ ವೇಳೇ ಯಾಕೆ ಕಪ್ಪು ಪಟ್ಟಿ ಕಟ್ಟಿದ ಆಟಗಾರ್ತಿಯರು

INDW vs AUSW: ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತ ವನಿತೆಯರಿಗೆ ಸಂಕಷ್ಟ

ಮುಂದಿನ ಸುದ್ದಿ
Show comments