Webdunia - Bharat's app for daily news and videos

Install App

RCB vs PBKS IPL 2025: ಪ್ಲೇ ಆಫ್ ಪಂದ್ಯಕ್ಕೆ ಮಳೆ ಬಂದರೆ ಆರ್ ಸಿಬಿಗೆ ಲಾಭನಾ, ನಷ್ಟನಾ ಇಲ್ಲಿ ನೋಡಿ

Krishnaveni K
ಗುರುವಾರ, 29 ಮೇ 2025 (12:08 IST)
Photo Credit: X
ಚಂಡೀಘಡ: ಐಪಿಎಲ್ 2025 ರಲ್ಲಿ ಇಂದು ಆರ್ ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಒಂದು ವೇಳೆ ಈ ಪಂದ್ಯಕ್ಕೆ ಮಳೆ ಬಂದರೆ ಫಲಿತಾಂಶ ಏನಾಗಲಿದೆ. ಇಲ್ಲಿದೆ ನೋಡಿ ವಿವರ.

ಚಂಢೀಘಡದಲ್ಲಿ ಇಂದು ರಾತ್ರಿ 7.30 ಕ್ಕೆ ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ಗೆ ತಲುಪಲಿದೆ. ಸೋತ ತಂಡಕ್ಕೆ ಫೈನಲ್ ಗೇರಲು ಇನ್ನೊಂದು ಅವಕಾಶ ಸಿಗಲಿದೆ. ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡದೊಂದಿಗೆ ಇನ್ನೊಂದು ಪಂದ್ಯ ನಡೆಯಲಿದೆ. ಆ ಪಂದ್ಯದಲ್ಲಿ ಗೆದ್ದ ತಂಡ ಮತ್ತೊಂದು ತಂಡವಾಗಿ ಫೈನಲ್ ಗೇರಲಿದೆ.

ಒಂದು ವೇಳೆ ಇಂದಿನ ಪಂದ್ಯಕ್ಕೆ ಮಳೆ ಬಂದರೆ ಬಿಸಿಸಿಐ ಕ್ವಾಲಿಫೈಯರ್ ಪಂದ್ಯಕ್ಕೆ ಮೀಸಲು ದಿನವನ್ನೂ ಘೋಷಿಸಿಲ್ಲ. ಹೀಗಾಗಿ ಈ ಪಂದ್ಯದ ಫಲಿತಾಂಶ ಏನಾಗಬಹುದು ಎಂಬ ಕುತೂಹಲ ಇದ್ದೇ ಇದೆ. ಮೀಸಲು ದಿನ ಇಲ್ಲದೇ ಇರುವುದರಿಂದ ಲೀಗ್ ಹಂತದ ಪಂದ್ಯದ ಅಂಕ ಮುಖ್ಯವಾಗಲಿದೆ.

ಲೀಗ್ ಹಂತದಲ್ಲಿ ಯಾವ ತಂಡ ಹೆಚ್ಚು ಅಂಕ ಪಡೆದು ಮೊದಲ ಸ್ಥಾನದಲ್ಲಿಯೋ ಆ ತಂಡ ಫೈನಲ್ ಗೇರಲಿದೆ. ಅಂದರೆ ಇಲ್ಲಿ ಪಂಜಾಬ್ ಗೆ ಹೆಚ್ಚು ಲಾಭವಾಗಲಿದೆ. ಫೈನಲ್ ಪಂದ್ಯಕ್ಕೆ ಮಾತ್ರ ಮೀಸಲು ದಿನವಿದ್ದು ಒಂದು ವೇಳೆ ಜೂನ್ 3 ರ ಪಂದ್ಯ ಮಳೆಯಿಂದ ರದ್ದಾದರೆ ಜೂನ್ 4 ಕ್ಕೆ ಪಂದ್ಯ ನಡೆಯುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asia Cup: ಏಷ್ಯಾ ಕಪ್ ಕ್ರಿಕೆಟ್ 2025 ಎಲ್ಲಿ ಲೈವ್ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಫೇಲ್

ಏಷ್ಯಾ ಕಪ್ ಚಾಂಪಿಯನ್ ಆದ ಭಾರತ ಹಾಕಿ ತಂಡಕ್ಕೆ ಅಭಿನಂದನೆಗಳ ಮಹಾಪೂರ

Pro Kabaddi League: ಹ್ಯಾಟ್ರಿಕ್‌ ಸೋಲಿನ ಬಳಿಕ ಬೆಂಗಳೂರು ಬುಲ್ಸ್‌ಗೆ ಮೊದಲ ಗೆಲುವಿನ ಸಿಹಿ

ಏಷ್ಯಾ ಕಪ್ ಗೆ ದುಬೈಗೆ ಬಂದ ಟೀಂ ಇಂಡಿಯಾ ಕ್ರಿಕೆಟಿಗರ ತಲೆ ಹೀಗಾಗಿರೋದು ನಿಜಾನಾ

ಮುಂದಿನ ಸುದ್ದಿ
Show comments