ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ IPL 2025ರ 42ನೇ ಪಂದ್ಯಾಟದಲ್ಲಿ ಆರ್‌ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿದೆ.
ತವರಿನಲ್ಲಿ ಸತತ ಸೋಲು ಅನುಭವಿಸಿ, ನಿರಾಸೆಯಲ್ಲಿರುವ ಅಭಿಮಾನಿಗಳಿಗೆ ಆರ್‌ಸಿಬಿ ಆಟಗಾರರು ಈ ಭಾರೀಯಾದರು ಮ್ಯಾಜಿಕ್ ಮಾಡುತ್ತಾರಾ ಎಂದು ಕಾಯಬೇಕು. ಒಂದು ವೇಳೆ ಇಂದಿನ ಪಂದ್ಯಾಟದಲ್ಲಿ ಆರ್‌ಸಿಬಿ ಗೆಲುವು ಸಾಧಿಸಿದರೆ. ಅಂಕ ಪಟ್ಟಿಯಲ್ಲೂ ಮಹತ್ವದ ಬದಲಾವಣೆಯನ್ನು ಕಾಣಬಹುದು.
ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದರೆ, 12 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರುವ ಸಾಧ್ಯತೆಯಿದೆ. ಇದರಿಂದ ಇವರ ಪ್ಲೇಆಫ್ ಹಾದಿ ಮತ್ತಷ್ಟು ಸುಗಮವಾಗಲಿದೆ. ಹೀಗಾಗಿ ತವರಿನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯಾಟ ಆರ್‌ಸಿಬಿ ಪಾಲಿಗೆ ತುಂಬಾನೇ ಮುಖ್ಯ.
ಇದುವರೆಗೆ ನಡೆದ 8 ಪಂದ್ಯಾಟಗಳಲ್ಲಿ ಆರ್‌ಸಿಬಿ 5ರಲ್ಲಿ ಗೆಲುವು ಸಾಧಿಸಿ, ಮೂರು ಸೋಲು ಅನುಭವಿಸಿದೆ. ಈ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 33 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಆರ್‌ಸಿಬಿ ತಂಡ 16 ಬಾರಿ ಗೆಲುವು ದಾಖಲಿಸಿದರೆ, ರಾಜಸ್ಥಾನ್ ರಾಯಲ್ಸ್ 14 ಬಾರಿ ಜಯ ಸಾಧಿಸಿದೆ. ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದೆ.
18ನೇ ಐಪಿಎಲ್ ಆವೃತ್ತಿಯಲ್ಲಿ ಮೊದಲ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್‌ಗೆ ಸೋಲುಣಿಸುವಲ್ಲಿ ಆರ್‌ಸಿಬಿ ಯಶಸ್ವಿಯಾಗಿತ್ತು. ಇದೀಗ ಇಂದಿನ ಪಂದ್ಯಾಟದಲ್ಲೂ ಅದೇ ನಿರೀಕ್ಷೆಯಲ್ಲಿ ಆರ್‌ಸಿಬಿ ಗ್ರೌಂಡ್‌ಗಿಳಿಯಲಿದೆ.