Publish Date: Sun, 17 Apr 2022 (08:30 IST)
Updated Date: Sun, 17 Apr 2022 (08:37 IST)
ಮುಂಬೈ: ಐಪಿಎಲ್ 2022 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 16 ರನ್ ಗಳ ರೋಚಕ ಜಯ ಗಳಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿತು. ಅಗ್ರ ಕ್ರಮಾಂಕದ ಮೂವರು ವೈಫಲ್ಯ ಅನುಭವಿಸಿದರೂ ಗ್ಲೆನ್ ಮ್ಯಾಕ್ಸ್ ವೆಲ್ 55 ರನ್, ಶಹಬಾಜ್ ಅಹಮ್ಮದ್ ಅಜೇಯ 32 ರನ್ ಗಳಿಸಿದರು. ಎಲ್ಲಕ್ಕಿಂತ ಹೆಚ್ಚು ಹೈಲೈಟ್ ಆಗಿದ್ದು ದಿನೇಶ್ ಕಾರ್ತಿಕ್ ಸಿಡಿಲಬ್ಬರದ ಬ್ಯಾಟಿಂಗ್. ಮತ್ತೆ ಆಪತ್ ಬಾಂಧವನಾದ ದಿನೇಶ್ ಕಾರ್ತಿಕ್ 34 ಎಸೆತಗಳಿಂದ 5 ಬೌಂಡರಿ, 5 ಸಿಕ್ಸರ್ ಸಿಡಿಸಿ ಅಜೇಯ 66 ರನ್ ಗಳಿಸಿದರು.
ಆರ್ ಸಿಬಿ ನೀಡಿದ ಗೆಲುವಿನ ಗುರಿ ಬೆನ್ನತ್ತಿದ ಡೆಲ್ಲಿ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಲಷ್ಟೇ ಶಕ್ತವಾಯಿತು. ಡೇವಿಡ್ ವಾರ್ನರ್ 66, ರಿಷಬ್ ಪಂತ್ 34 ರನ್ ಗಳಿಸಿದರು.