Publish Date: Wed, 17 Jan 2024 (13:00 IST)
Updated Date: Wed, 17 Jan 2024 (13:20 IST)
ಬೆಂಗಳೂರು: ಅಫ್ಘಾನಿಸ್ತಾನ ವಿರುದ್ಧ ಇಂದು ನಡೆಯಲಿರುವ ಟಿ20 ಪಂದ್ಯಕ್ಕೆ ಅಭ್ಯಾಸ ನಡೆಸುತ್ತಿರುವ ಟೀಂ ಇಂಡಿಯಾ ಪಾಳಯಕ್ಕೆ ರಿಷಬ್ ಪಂತ್ ಎಂಟ್ರಿ ಕೊಟ್ಟಿದ್ದಾರೆ.
ರಿಷಬ್ ಪಂತ್ ರಸ್ತೆ ಅಪಘಾತದ ಬಳಿಕ ಸಕ್ರಿಯ ಕ್ರಿಕೆಟ್ ನಿಂದ ದೂರವಿದ್ದಾರೆ. ಇತ್ತೀಚೆಗಷ್ಟೇ ಫಿಟ್ನೆಸ್ ಮರಳಿ ಪಡೆಯುತ್ತಿದ್ದು, ಐಪಿಎಲ್ ವೇಳೆಗೆ ತಂಡಕ್ಕೆ ಕಮ್ ಬ್ಯಾಕ್ ಮಾಡಲು ಪರಿಶ್ರಮಪಡುತ್ತಿದ್ದಾರೆ.
ಇದಕ್ಕಾಗಿ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಇಲ್ಲಿಯೇ ಅಭ್ಯಾಸ ನಡೆಸುತ್ತಿದ್ದ ಟೀಂ ಇಂಡಿಯಾ ಕ್ರಿಕೆಟಿಗರನ್ನು ರಿಷಬ್ ಪಂತ್ ಭೇಟಿ ಮಾಡಿ ಕೆಲವು ಕಾಲ ಕಳೆದಿದ್ದಾರೆ.
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಹಿರಿಯ ಆಟಗಾರರ ಜೊತೆ ರಿಷಬ್ ಮಸ್ತಿ ಮಾಡುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಿರಿಯ ಆಟಗಾರರು ಮಾತ್ರವಲ್ಲದೆ, ಇತ್ತೀಚೆಗಷ್ಟೇ ಸ್ಟಾರ್ ಗಳಾಗಿರುವ ರಿಂಕು ಸಿಂಗ್ ಮೊದಲಾದ ಯುವ ಆಟಗಾರರ ಜೊತೆಗೂ ಸಂವಹನ ನಡೆಸಿದ್ದಾರೆ.