Publish Date: Wed, 06 Nov 2024 (15:41 IST)
Updated Date: Wed, 06 Nov 2024 (15:42 IST)
ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್‌ನ ಮೆಗಾ ಹರಾಜಿಗಾಗಿ ಸಿದ್ಧತೆ ಜೋರಾಗಿದೆ. ಇದೀಗ ಆಟಗಾರರ ನೋಂದಣಿ ಪ್ರಕ್ರಿಯೆ ಮುಗಿದೆ. ನವೆಂಬರ್ 24 ಮತ್ತು 25 ದಿನಾಂಕವನ್ನು ಮೆಗಾ ಹರಾಜು ಪ್ರಕ್ರಿಯೆಗೆ ನಿಗದಿ ಮಾಡಲಾಗಿದೆ.
ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜೆದ್ದಾದಲ್ಲಿ ಆಟಗಾರರ ಮೆಗಾ ಆಕ್ಷನ್ ನಡೆಯಲಿದೆ. ಈ ಹರಾಜಿಗಾಗಿ ಟೀಮ್ ಇಂಡಿಯಾದ ಮೂವರು ಆಟಗಾರರು ಗರಿಷ್ಠ 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದಾರೆ. ಅವರೆಂದರೆ...
ಕೆಳದ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದ ರಿಷಭ್ ಪಂತ್ 16 ಕೋಟಿ ಸಂಭಾವನೆ ಪಡೆದಿದ್ದರು. ಆದರೆ ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿರುವ ಪಂತ್ 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ, ಕನ್ನಡಿಗ ಕೆಎಲ್ ರಾಹುಲ್ ಕೂಡ ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಸೀಸನ್ನಲ್ಲಿ ಎಲ್ಎಸ್ಜಿ ಫ್ರಾಂಚೈಸಿಯಿಂದ 17 ಕೋಟಿ ರೂ. ಪಡೆದಿದ್ದ ರಾಹುಲ್ ಈ ಬಾರಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಏಳು ಸೀಸನ್ ಆಡಿರುವ ಮೊಹಮ್ಮದ್ ಸಿರಾಜ್ ಅವರನ್ನು ಈ ಬಾರಿ ತಂಡದಿಂದ ರಿಲೀಸ್ ಮಾಡಲಾಗಿದೆ. ಇದೀಗ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ಸಿರಾಜ್ ತಮ್ಮ ಮೂಲ ಬೆಲೆಯನ್ನು 2 ಕೋಟಿ ರೂ. ಎಂದು ಘೋಷಿಸಿದ್ದಾರೆ.
Sampriya
Publish Date: Wed, 06 Nov 2024 (15:41 IST)
Updated Date: Wed, 06 Nov 2024 (15:42 IST)