Webdunia - Bharat's app for daily news and videos

Install App

ಐಪಿಎಲ್‌ ಮೆಗಾ ಹರಾಜಿಗೆ ಗರಿಷ್ಠ ಮೂಲ ಬೆಲೆ ಘೋಷಿಸಿಕೊಂಡ ರಿಷಭ್ ಪಂತ್, ರಾಹುಲ್

Sampriya
ಬುಧವಾರ, 6 ನವೆಂಬರ್ 2024 (15:41 IST)
Photo Courtesy X
ಬೆಂಗಳೂರು: ಇಂಡಿಯನ್‌ ಪ್ರಿಮಿಯರ್‌ ಲೀಗ್‌ನ ಮೆಗಾ ಹರಾಜಿಗಾಗಿ ಸಿದ್ಧತೆ ಜೋರಾಗಿದೆ. ಇದೀಗ ಆಟಗಾರರ ನೋಂದಣಿ ಪ್ರಕ್ರಿಯೆ ಮುಗಿದೆ. ನವೆಂಬರ್ 24 ಮತ್ತು 25 ದಿನಾಂಕವನ್ನು ಮೆಗಾ ಹರಾಜು ಪ್ರಕ್ರಿಯೆಗೆ ನಿಗದಿ ಮಾಡಲಾಗಿದೆ.

ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜೆದ್ದಾದಲ್ಲಿ ಆಟಗಾರರ ಮೆಗಾ ಆಕ್ಷನ್ ನಡೆಯಲಿದೆ. ಈ ಹರಾಜಿಗಾಗಿ ಟೀಮ್ ಇಂಡಿಯಾದ ಮೂವರು ಆಟಗಾರರು ಗರಿಷ್ಠ 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದಾರೆ. ಅವರೆಂದರೆ...

ಕೆಳದ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದ ರಿಷಭ್ ಪಂತ್ 16 ಕೋಟಿ ಸಂಭಾವನೆ ಪಡೆದಿದ್ದರು. ಆದರೆ ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿರುವ ಪಂತ್ 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ, ಕನ್ನಡಿಗ ಕೆಎಲ್ ರಾಹುಲ್ ಕೂಡ ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಸೀಸನ್​ನಲ್ಲಿ ಎಲ್​ಎಸ್​ಜಿ ಫ್ರಾಂಚೈಸಿಯಿಂದ 17 ಕೋಟಿ ರೂ. ಪಡೆದಿದ್ದ ರಾಹುಲ್ ಈ ಬಾರಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಏಳು ಸೀಸನ್ ಆಡಿರುವ ಮೊಹಮ್ಮದ್ ಸಿರಾಜ್ ಅವರನ್ನು ಈ ಬಾರಿ ತಂಡದಿಂದ ರಿಲೀಸ್ ಮಾಡಲಾಗಿದೆ. ಇದೀಗ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ಸಿರಾಜ್ ತಮ್ಮ ಮೂಲ ಬೆಲೆಯನ್ನು 2 ಕೋಟಿ ರೂ. ಎಂದು ಘೋಷಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ರಾಜೀನಾಮೆ: ದಿಡೀರ್ ನಿರ್ಧಾರದ ಹಿಂದಿದೆ ಕಾರಣ

ರೋಹಿತ್ ಶರ್ಮಾರನ್ನು ಹೊರಗಟ್ಟಲೆಂದೇ ಬಿಸಿಸಿಐ ಮಾಡಿರುವ ಪ್ಲ್ಯಾನ್ ಇದು: ಮನೋಜ್ ತಿವಾರಿ

ಶ್ರೀಶಾಂತ್, ಹರ್ಭಜನ್ ಸಿಂಗ್ ರ ಆ ವಿಡಿಯೋ 17 ವರ್ಷಗಳ ಬಳಿಕ ಬಿಡುಗಡೆಯಾಯ್ತು

ಇಂದಿನಿಂದ ಹೈವೋಲ್ಟೇಜ್‌ ಕಬಡ್ಡಿ ಹಬ್ಬ: ಬೆಂಗಳೂರು ಗೂಳಿಗಳ ಕಾಳಗಕ್ಕೆ ವೇದಿಕೆ ಸಜ್ಜು

ಮಾರ್ಕೆಟಿಂಗ್ ಗಿಮಿಕ್‌ಗಾಗಿ ನಕಲಿ ಕಣ್ಣೀರು: RCB ಪ್ರಾಂಚೈಸಿಯನ್ನು ತರಾಟೆಗೆ ತೆಗೆದುಕೊಂಡ ಮೋಹನ್‌ದಾಸ್ ಪೈ

ಮುಂದಿನ ಸುದ್ದಿ
Show comments