Select Your Language

Notifications

webdunia
webdunia
webdunia
webdunia

ಅಂತಾರಾಷ್ಟ್ರೀಯ ಕ್ರಿಕೆಟ್, ಐಪಿಎಲ್ ಗೆ ರಾಬಿನ್ ಉತ್ತಪ್ಪ ಗುಡ್ ಬೈ

ಅಂತಾರಾಷ್ಟ್ರೀಯ ಕ್ರಿಕೆಟ್, ಐಪಿಎಲ್ ಗೆ ರಾಬಿನ್ ಉತ್ತಪ್ಪ ಗುಡ್ ಬೈ
ಬೆಂಗಳೂರು , ಗುರುವಾರ, 15 ಸೆಪ್ಟಂಬರ್ 2022 (09:30 IST)
ಬೆಂಗಳೂರು: ಕರ್ನಾಟಕ ಮೂಲದ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅಂತಾರಾಷ್ಟ್ರೀಯ ಕ್ರಿಕೆಟ್ ಮತ್ತು ಐಪಿಎಲ್ ಗೆ ವಿದಾಯ ಘೋಷಿಸಿದ್ದಾರೆ.

2007 ರಲ್ಲಿ ಚೊಚ್ಚಲ ಟಿ20 ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಉತ್ತಪ್ಪ ಕೆಲವು ವರ್ಷಗಳ ಹಿಂದಷ್ಟೇ ಕರ್ನಾಟಕ ತಂಡದ ಪ್ರಮುಖ ಆಟಗಾರರಾಗಿದ್ದರು. ಭಾರತದ ಪರ 46 ಏಕದಿನ ಮತ್ತು 13 ಟಿ20 ಪಂದ್ಯಗಳನ್ನಾಡಿ 934 ಮತ್ತು 249 ರನ್ ಗಳಿಸಿದ್ದಾರೆ.

ಐಪಿಎಲ್ ನಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್, ಆರ್ ಸಿಬಿ, ರಾಜಸ್ಥಾನ್ ರಾಯಲ್ಸ್ ಮತ್ತು ಪುಣೆ ವಾರಿಯರ್ಸ್ ಪರವಾಗಿಯೂ ಆಡಿದ್ದಾರೆ. ಇದೀಗ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವಕಪ್ ಗೆ ತಯಾರಿ ಆರಂಭಿಸಿದ ಜಸ್ಪ್ರೀತ್ ಬುಮ್ರಾ