Select Your Language

Notifications

webdunia
webdunia
webdunia
webdunia

ಕ್ರಿಕೆಟ್ ಬಿಟ್ಟು ಅಂಬಾನಿ ಮನೆ ಮದುವೆಗೆ ಹಾಜರಾದ ರೋಹಿತ್ ಶರ್ಮಾ

Rohit Sharma

Krishnaveni K

ಜಾಮ್ ನಗರ , ಶನಿವಾರ, 2 ಮಾರ್ಚ್ 2024 (11:58 IST)
Photo Courtesy: Twitter
ಜಾಮ್ ನಗರ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ನಡುವೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಪ್ರಿ ವೆಡ್ಡಿಂಗ್ ಕಾರ್ಯಕ್ರಮಕ್ಕೆ ಹಾಜರಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧ ಕಳೆದ ನಾಲ್ಕು ಟೆಸ್ಟ್ ಗಳ ಪೈಕಿ ಭಾರತ ಮೂರು ಪಂದ್ಯ ಗೆದ್ದು ಸರಣಿ ತನ್ನದಾಗಿಸಿಕೊಂಡಿದೆ. ಮಾರ್ಚ್ 7 ರಿಂದ ಧರ್ಮಶಾಲಾದಲ್ಲಿ ಕೊನೆಯ ಪಂದ್ಯ ನಡೆಯಲಿದೆ. ಸರಣಿ ಟೀಂ ಇಂಡಿಯಾ ಗೆದ್ದಿರುವುದರಿಂದ ಕೊನೆಯ ಪಂದ್ಯ ಔಪಚಾರಿಕವಾಗಿದೆ.

ಈಗ ಸಿಕ್ಕಿರುವ ಕಿರು ಅವಧಿಯ ಬ್ರೇಕ್ ನಲ್ಲಿ ರೋಹಿತ್ ಶರ್ಮಾ ಮತ್ತು ಪತ್ನಿ ರಿತಿಕಾ ದಂಪತಿ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ಪ್ರಿ ವೆಡ್ಡಿಂಗ್ ಕಾರ್ಯಕ್ರಮಕ್ಕೆ ಬಂದಿದ್ದಾರೆ. ಮೂರು ದಿನಗಳ ಕಾಲ ಗುಜರಾತ್ ನ ಜಾಮ್ ನಗರದಲ್ಲಿ ಪ್ರಿ ವೆಡ್ಡಿಂಗ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ರೋಹಿತ್ ಮತ್ತು ಪತ್ನಿ ತೆರಳಿದ್ದಾರೆ.

ಪ್ರಿ ವೆಡ್ಡಿಂಗ್ ಕಾರ್ಯಕ್ರಮಕ್ಕೆ ಈಗಾಗಲೇ ಸಿನಿಮಾ, ಉದ್ಯಮದ ಸೆಲೆಬ್ರಿಟಿಗಳಾದ ಕ್ರಿಕೆಟಿಗರಾದ ಸಚಿನ್ ತೆಂಡುಲ್ಕರ್, ಧೋನಿ, ಜಹೀರ್ ಖಾನ್ ಸೇರಿದಂತೆ ಅನೇಕ ಕ್ರೀಡಾ ತಾರೆಯರು ಕುಟುಂಬ ಸಮೇತ ಜಾಮ್ ನಗರಕ್ಕೆ ಬಂದಿದ್ದಾರೆ. ಅಂಬಾನಿ ಒಡೆತನದ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕರೂ ಆಗಿರುವ ರೋಹಿತ್ ಈಗ ಮನೆ ಮದುವೆಗೆ ಬಂದಂತಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಬ್ಲ್ಯುಪಿಎಲ್ 2024: ಆರ್ ಸಿಬಿಗೆ ಇಂದು ಪ್ರಬಲ ಮುಂಬೈ ಇಂಡಿಯನ್ಸ್ ಎದುರಾಳಿ