ಮುಂಬೈ: ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು ಟೆಸ್ಟ್ ಕ್ರಿಕೆಟ್ ಮಾದರಿಗೆ ವಿದಾಯ ಘೋಷಣೆ ಮಾಡಿದ್ದಾರೆ.
ರೋಹಿತ್ ಅವರನ್ನು ಟೆಸ್ಟ್ ನಾಯಕತ್ವದಿಂದ ತೆಗೆಯಲಾಗಿದೆ ಎಂಬ ವರದಿಗಳು ವೈರಲ್ ಆದ ಕೆಲವೇ ನಿಮಿಷಗಳ ನಂತರ ಭಾರತದ ನಾಯಕ ರೋಹಿತ್ ಶರ್ಮಾ ತಕ್ಷಣದಿಂದ ಜಾರಿಗೆ ಬರುವಂತೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದರು.
38 ವರ್ಷದ ಅವರು ತಮ್ಮ ವೃತ್ತಿಜೀವನದ ದ್ವಿತೀಯಾರ್ಧದಲ್ಲಿ ಭಾರತದ ಪರ ಅತ್ಯಂತ ಫಲಪ್ರದ ಟೆಸ್ಟ್ ಬ್ಯಾಟ್ಸ್‌ಮನ್ ಆಗಿದ್ದರು. 67 ಟೆಸ್ಟ್‌ಗಳಲ್ಲಿ 40.57 ಸರಾಸರಿಯಲ್ಲಿ 12 ಶತಕಗಳು ಮತ್ತು 18 ಅರ್ಧಶತಕಗಳೊಂದಿಗೆ 4301 ರನ್ ಗಳಿಸಿದ್ದಾರೆ.
ರೋಹಿತ್ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಭಾರತವನ್ನು ಮುನ್ನಡೆಸಿದ್ದರು. ಕಳೆದ ವರ್ಷ ನ್ಯೂಜಿಲೆಂಡ್ ವಿರುದ್ಧದ ಕೊನೆಯ ಎರಡು ಸರಣಿಗಳನ್ನು ಮತ್ತು ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಭಾರತವನ್ನು ಮುನ್ನಡೆಸಿದ್ದರು. ಆದರೆ, ಎರಡೂ ಸರಣಿಯನ್ನು ಭಾರತ ಸೋತು ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಿಸುವಲ್ಲಿ ವಿಫಲವಾಗಿತ್ತು.
ಮುಂದಿನ ತಿಂಗಳು ಆರಂಭವಾಗಲಿರುವ ಇಂಗ್ಲೆಂಡ್ ಪ್ರವಾಸಕ್ಕೆ ರೋಹಿತ್ ಶರ್ಮಾ ಅವರನ್ನು ಭಾರತದ ಟೆಸ್ಟ್ ತಂಡದ ನಾಯಕ ಸ್ಥಾನದಿಂದ ವಜಾ ಮಾಡಲು ರಾಷ್ಟ್ರೀಯ ಆಯ್ಕೆದಾರರು ನಿರ್ಧರಿಸಿದ್ದರು.