Publish Date: Sat, 05 May 2018 (08:59 IST)
Updated Date: Sat, 05 May 2018 (09:01 IST)
ನವದೆಹಲಿ: ಮುಂಬೈ ಇಂಡಿಯನ್ಸ್ ಪರ ಐಪಿಎಲ್ ಆಡುತ್ತಿರುವ ಟೀಂ ಇಂಡಿಯಾ ಕ್ರಿಕೆಟಿಗ ರೋಹಿತ್ ಶರ್ಮಾ ಟಿ20 ಕ್ರಿಕೆಟ್ ಮಾದರಿಯಲ್ಲಿ ನೂತನ ದಾಖಲೆ ಬರೆದಿದ್ದಾರೆ.
ಎಲ್ಲಾ ವರ್ಗದ ಟಿ20 ಕ್ರಿಕೆಟ್ ಮಾದರಿಯಲ್ಲಿ 300 ಸಿಕ್ಸರ್ ಸಿಡಿಸಿದ ಮೊದಲ ಭಾರತೀಯ ಎಂಬ ದಾಖಲೆಗೆ ರೋಹಿತ್ ಪಾತ್ರರಾಗಿದ್ದಾರೆ. ಇಂದೋರ್ ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಈ ದಾಖಲೆ ಮಾಡಿದ್ದಾರೆ. ಈ ಪಂದ್ಯವನ್ನು ರೋಹಿತ್ 15 ಬಾಲ್ ಗಳಲ್ಲಿ 24 ರನ್ ಸಿಡಿಸಿದ್ದರು. ಈ ಪಂದ್ಯವನ್ನು ಮುಂಬೈ 6 ವಿಕೆಟ್ ಗಳಿಂದ ಗೆದ್ದುಕೊಂಡಿದೆ.
ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆ ಕ್ರಿಸ್ ಗೇಲ್ (842) ಹೆಸರಲ್ಲಿದೆ. ಭಾರತೀಯರ ಪೈಕಿ ರೋಹಿತ್ ಮೊದಲಿಗರಾಗಿದ್ದು, ಸುರೇಶ್ ರೈನಾ 290 ಸಿಕ್ಸರ್ ಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.