Webdunia - Bharat's app for daily news and videos

Install App

ಕಾಲಿಗೆ ಬಿದ್ದ ಅಭಿಮಾನಿ: ಜಾರಿ ಬಿದ್ದ ರೋಹಿತ್ ಶರ್ಮಾ!

Webdunia
ಭಾನುವಾರ, 13 ಅಕ್ಟೋಬರ್ 2019 (09:16 IST)
ಪುಣೆ: ಕ್ರಿಕೆಟ್ ಪಂದ್ಯವಾಗುವಾಗ  ಅನೇಕ ಬಾರಿ ಅಭಿಮಾನಿಗಳು ಮೈದಾನಕ್ಕೆ ನುಗ್ಗಿ ದಾಂಧಲೆ ಎಬ್ಬಿಸುವ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತವೆ. ಇದೀಗ ಭಾರತ ಮತ್ತು ದ.ಆಫ್ರಿಕಾ ನಡುವೆ ಪುಣೆಯಲ್ಲಿ ನಡೆಯುತ್ತಿರುವ ಮೈದಾನದಲ್ಲೂ ಇಂತಹದ್ದೇ ಘಟನೆ ನಡೆದಿದೆ.


ಭಾರತ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ಭದ್ರತಾ ಅಧಿಕಾರಿಯೊಬ್ಬರ ಕಣ್ಣು ತಪ್ಪಿಸಿ ಮೈದಾನಕ್ಕೆ ನುಗ್ಗಿದ  ಅಭಿಮಾನಿ ನೇರವಾಗಿ ರೋಹಿತ್ ಶರ್ಮಾ ಕಾಲಿಗೆ ಬಿದ್ದಿದ್ದಾನೆ. ಈ ವೇಳೆ ಆಯತಪ್ಪಿದ ರೋಹಿತ್ ಶರ್ಮಾ ಅಭಿಮಾನಿಯ ಮೇಲೆ ಬಿದ್ದು ನೆಲಕ್ಕುರುಳಿದ್ದಾರೆ.

ಈ ಘಟನೆ ಇದೀಗ ಆಟಗಾರರ ಭದ್ರತೆ ಬಗ್ಗೆ ಪ್ರಶ್ನೆಗಳು ಮೂಡುವಂತೆ ಮಾಡಿದೆ. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಆಟಗಾರರಿಗೆ ಮೈದಾನದಲ್ಲಿ ಏನು ಬೇಕಾದರೂ ಆಗಬಹುದು. ಭದ್ರತಾ ಅಧಿಕಾರಿಗಳು ಈ ರೀತಿ ನುಗ್ಗುವ ಜನರತ್ತ ನೋಡದೇ ಮೈದಾನದಲ್ಲಿ ಪಂದ್ಯ ನಡೆಯುವುದನ್ನು ನೋಡುತ್ತಾ ಕುಳಿತರೆ ಈ ರೀತಿಯ ಲೋಪವಾಗುತ್ತದೆ ಎಂದು ಕಿಡಿ ಕಾರಿದ್ದಾರೆ. ಅದೃಷ್ಟವಶಾತ್ ರೋಹಿತ್ ಗೆ ಯಾವುದೇ ಗಾಯವಾಗಿಲ್ಲ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments