ಮುಂಬೈ ಕ್ಯಾಪ್ಟನ್ಸಿಯಿಂದ ಕೆಳಗಿಳಿದ ಮೇಲೆ ರೋಹಿತ್ ಶರ್ಮಾಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!

Webdunia
ಸೋಮವಾರ, 18 ಡಿಸೆಂಬರ್ 2023 (11:09 IST)
ಮುಂಬೈ: ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕಿತ್ತು ಹಾಕಿದ ಮೇಲೆ ಅವರಿಗೆ ಡಿಮ್ಯಾಂಡ್ ಹೆಚ್ಚಾಗಿದೆ!

ರೋಹಿತ್ ಐಪಿಎಲ್ ನ ಅತ್ಯಂತ ಯಶಸ್ವೀ ನಾಯಕ ಎಂಬುದರಲ್ಲಿ ಎರಡು ಮಾತಿಲ್ಲ. ಅದಕ್ಕೆ ಅವರು ಗೆದ್ದಿರುವ ಐದು ಐಪಿಎಲ್ ಟ್ರೋಫಿಗಳೇ ಸಾಕ್ಷಿ. ಟೀಂ ಇಂಡಿಯಾ ನಾಯಕರಾಗಿಯೂ ರೋಹಿತ್ ಉತ್ತಮ ದಾಖಲೆ ಹೊಂದಿದ್ದಾರೆ.

ಸ್ವತಃ ಬಿಗ್ ಹಿಟ್ಟರ್ ಕೂಡಾ ಆಗಿರುವುದರಿಂದ ರೋಹಿತ್ ಗೆ ಐಪಿಎಲ್ ನಲ್ಲಿ ಭಾರೀ ಬೇಡಿಕೆಯಿದೆ. ಇದೀಗ ಮುಂಬೈ ತಂಡ ನಾಯಕತ್ವದಿಂದ ರೋಹಿತ್ ರನ್ನು ಕಿತ್ತು ಹಾಕಿದ ಮೇಲೆ ಅವರಿಗೆ ಡಿಮ್ಯಾಂಡ್ ಹೆಚ್ಚಿದೆ. ಬೇರೆ ಫ‍್ರಾಂಚೈಸಿಗಳು ಮುಂದಿನ ದಿನಗಳಲ್ಲಿ ರೋಹಿತ್ ರನ್ನು ತಮ್ಮ ತಂಡಕ್ಕೆ ಕರೆಯಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ.

ಟ್ರೇಡಿಂಗ್ ವಿಂಡೋ ಸಮಯದಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ಗೆ ಈ ಸುಳಿವು ಸಿಕ್ಕಿತ್ತು. ಹೀಗಾಗಿ ರೋಹಿತ್ ರನ್ನು ತಮಗೆ ನೀಡುವಂತೆ ಕೇಳಿಕೊಂಡಿತ್ತು. ಆದರೆ ಮುಂಬೈ ನಿರಾಕರಿಸಿತ್ತು.  ಡೆಲ್ಲಿ ಮಾತ್ರವಲ್ಲದೆ, ಬೇರೆ ತಂಡಗಳೂ ರೋಹಿತ್ ರನ್ನು ತಮ್ಮ ತಂಡಕ್ಕೆ ಕರೆತಂದು ನಾಯಕ ಪಟ್ಟ ನೀಡಲು ಆಫರ್ ನೀಡುತ್ತಿದೆಯಂತೆ. ಮುಂದಿನ ದಿನಗಳಲ್ಲಿ ರೋಹಿತ್ ಬೇರೆ ತಂಡದ ಪಾಲಾದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ರೋಹಿತ್, ಕೊಹ್ಲಿಗೆ ದೇಶೀಯ ಟೂರ್ನಿ ಮಾಡಲು ಒತ್ತಡ ಹೇರಲಾಗಿದೆಯೇ

ಮುಂದಿನ ಸುದ್ದಿ
Show comments