ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಟೆಸ್ಟ್ ಪರೀಕ್ಷೆ

Krishnaveni K
ಶನಿವಾರ, 30 ಆಗಸ್ಟ್ 2025 (10:46 IST)
ಮುಂಬೈ: ಟೀಂ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡಲು ರೆಡಿಯಾಗಿರುವ ರೋಹಿತ್ ಶರ್ಮಾ ಮತ್ತು ವೇಗಿ ಜಸ್ಪ್ರೀತ್ ಬುಮ್ರಾ ಈಗ ಫಿಟ್ನೆಸ್ ಪರೀಕ್ಷೆಗೆ ರೆಡಿಯಾಗಿದ್ದಾರೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ ಆಡಿದ ಬಳಿಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿಲ್ಲ. ಟೆಸ್ಟ್ ಮತ್ತು ಟಿ20 ರಿಂದ ನಿವೃತ್ತಿ ಹೊಂದಿರುವ ರೋಹಿತ್ ಈಗ ಏಕದಿನ ಮಾದರಿಯಲ್ಲಿ ಮಾತ್ರ ಆಡುತ್ತಿದ್ದಾರೆ. ಆದರೆ ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ಏಕದಿನ ಸರಣಿ ಇರಲಿಲ್ಲ. ಹೀಗಾಗಿ ರೋಹಿತ್, ಕೊಹ್ಲಿ ಕಣಕ್ಕಿಳಿದೇ ಇರಲಿಲ್ಲ.

ಇದೀಗ ಕಮ್ ಬ್ಯಾಕ್ ಮಾಡಲು ರೋಹಿತ್ ಫಿಟ್ನೆಸ್ ಪರೀಕ್ಷೆಗೊಳಪಡಬೇಕಿದೆ. ಹೀಗಾಗಿ ರೋಹಿತ್ ಸದ್ಯದಲ್ಲೇ ಯೋ ಯೋ ಟೆಸ್ಟ್ ಗೊಳಪಡಲಿದ್ದಾರೆ ಎನ್ನಲಾಗಿದೆ. ಅವರ ಜೊತೆಗೆ ವೇಗಿ ಜಸ್ಪ್ರೀತ್ ಬುಮ್ರಾ ಕೂಡಾ ಫಿಟ್ನೆಸ್ ಪರೀಕ್ಷೆಗೊಳಪಡಲಿದ್ದಾರೆ. ಬುಮ್ರಾ ಏಷ್ಯಾ ಕಪ್ ಟೂರ್ನಿಯಲ್ಲಿ ಆಡಲಿದ್ದಾರೆ. ಇದಕ್ಕೆ ಮೊದಲು ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಿದ್ದರು. ಆಗ ಅವರು ಗಾಯದ ಭೀತಿಯಿಂದ ಎಲ್ಲಾ ಪಂದ್ಯ ಆಡಿರಲಿಲ್ಲ. ಇದೀಗ ಅವರೂ ಫಿಟ್ನೆಸ್ ಪರೀಕ್ಷೆಗೊಳಪಡಲಿದ್ದಾರೆ. ಅದಾದ ಬಳಿಕ ಏಷ್ಯಾ ಕಪ್ ಗೆ ಯುಎಇಗೆ ಪ್ರಯಾಣ ಬೆಳೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ಮದುವೆ ದಿಡೀರ್ ಮುಂದೂಡಿಕೆ: ಕಾರಣ ಶಾಕಿಂಗ್

Australian Open: ದೀರ್ಘ ಕಾಯುವಿಕೆಯ ಬಳಿಕ ಕೊನೆಗೂ ಕಿರೀಟ ಗೆದ್ದ ಲಕ್ಷ್ಯ ಸೇನ್

ಪಲಾಶ್‌ ಜೊತೆ ಸ್ಮೃತಿ ಮಂದಾನ ಹೊಸ ಇನಿಂಗ್ಸ್‌: ಕುಣಿದು ಕುಪ್ಪಳಿಸಿದ ಕ್ಯೂಟ್‌ ಜೊಡಿ

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

ಮುಂದಿನ ಸುದ್ದಿ
Show comments