Webdunia - Bharat's app for daily news and videos

Install App

ಟಿ20 ಸರಣಿಗೂ ಮೊದಲೇ 20-20 ಝಲಕ್ ತೋರಿಸಿದ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ

Webdunia
ಗುರುವಾರ, 1 ನವೆಂಬರ್ 2018 (17:03 IST)
ತಿರುವನಂತಪುರಂ: ಟಿ20 ಸರಣಿಗೂ ಮೊದಲೇ ತಿರುವನಂತಪುರಂನ ಮೈದಾನದಲ್ಲಿ ಚುಟುಕು ಕ್ರಿಕೆಟ್ ನ ಝಲಕ್ ಪ್ರೇಕ್ಷಕರಿಗೆ ಸಿಕ್ಕಿತು. ಇದಕ್ಕೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಧನ್ಯವಾದ ಹೇಳಲೇಬೇಕು.

ವೆಸ್ಟ್ ಇಂಡೀಸ್ ವಿರುದ್ಧ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಗೆಲುವಿಗೆ 105 ರನ್ ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಕೇವಲ 14.5 ಓವರ್ ಗಳಲ್ಲೇ 1 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು.

ಶಿಖರ್ ಧವನ್ ವಿಕೆಟ್ ಆರಂಭದಲ್ಲಿಯೇ ಕಳೆದುಕೊಂಡರೂ ನಂತರ ಜತೆಯಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ಮಾದರಿಯಲ್ಲಿ ಬ್ಯಾಟ್ ಬೀಸಿದರು. ರೋಹಿತ್ ಮತ್ತು ಕೊಹ್ಲಿ ಸಿಕ್ಸರ್, ಬೌಂಡರಿಗಳ ಸುರಿಮಳೆ ಸುರಿಸುತ್ತಿದ್ದರೆ ಪ್ರೇಕ್ಷಕರು ಹುಚ್ಚೆದ್ದು ಕುಣಿದರು. ರೋಹಿತ್ 56 ಎಸೆತಗಳಲ್ಲಿ 4 ಸಿಕ್ಸರ್ ಗಳೊಂದಿಗೆ ಅಜೇಯ 63 ರನ್ ಗಳಿಸಿದರೆ ಕೊಹ್ಲಿ 29 ಎಸೆತಗಳಲ್ಲಿ 33 ರನ್ ಗಳಿಸಿ ಅಜೇಯರಾಗುಳಿದರು.  ಇದರೊಂದಿಗೆ ಐದು ಪಂದ್ಯಗಳ ಸರಣಿಯನ್ನು ಭಾರತ 3-1 ಅಂತರದಿಂದ ಗೆದ್ದುಕೊಂಡಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments